ಇಂದು (ಮೇ 9) ಆರ್‌ಸಿಬಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವೆ ನಡೆಯಬೇಕಿದ್ದ ಐಪಿಎಲ್ 2025ರ 59ನೇ ಪಂದ್ಯ ರದ್ದಾಗಿದೆ. ಅಷ್ಟೇ ಅಲ್ಲದ, ಈ ಬಾರಿ ಆರ್‌ಸಿಬಿ ಕಪ್ ಗೆಲ್ಲುವ ಆಸೆಯನ್ನು ಬದಿಗಿಡಬೇಕಿದೆ.
ಐಪಿಎಲ್ ಪ್ಲೇ ಆಫ್ ಅಂತ್ಯಕ್ಕೆ ಬಂದು ನಿಂತಿದ್ದು, ಇನ್ನೂ ಕೆಲವೇ ದಿನಗಳಲ್ಲಿ ಟೂರ್ನಿಯೂ ಮುಕ್ತಾಯವಾಗುವ ಹಂತದಲ್ಲಿತ್ತು. ಈ ನಡುವೆಯೇ ಭಾರತ-ಪಾಕಿಸ್ತಾನದ ನಡುವೆ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿರವ ಹಿನ್ನೆಲೆ ಬೇರೆ ಯಾವುದೇ ದಾರಿಯಿಲ್ಲದೆ, ಆಟಗಾರರ ಸುರಕ್ಷತೆ ದೃಷ್ಟಿಯಿಂದ ಬಿಸಿಸಿಐ ಈ ಬಾರಿಯ ಇಡೀ ಟೂರ್ನಿಯನ್ನೇ ರದ್ದುಪಡಿಸಿದೆ.ಐಪಿಎಲ್ ವಿಶ್ವದ ಅತ್ಯಂತ ಶ್ರೀಮಂತ ಲೀಗ್ ಆಗಿದೆ. ಬರೀ ಭಾರತದ ಆಟಗರರು ಅಷ್ಟೇ ಅಲ್ಲದ, ವಿದೇಶಿ ಆಟಗಾರರು ಸಹ ಆಡುವ ಪಂದ್ಯ ಇದಾಗಿದೆ. ಆದ್ದರಿಂದ ಅವರ ಸುರಕ್ಷತೆ ಕೂಡ ಮುಖ್ಯವಾಗಿದ್ದು,
ಮುಂಜಾಗ್ರತಾ ಕ್ರಮವಾಗಿ ಬಿಸಿಸಿಐ ಈ ನಿರ್ಧಾರವನ್ನು ತೆಗೆದುಕೊಂಡಿದೆ.
ಲಕ್ನೋ ಮತ್ತು ಆರ್‌ಸಿಬಿ ನಡುವಿನ ಈ ಪಂದ್ಯವು ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಿಗದಿಯಾಗಿತ್ತು. ಈಗಾಗಲೇ ಪಂಜಾಬ್ ಕಿಂಗ್ಸ್ ಹಾಗೂ ಡಲ್ಲಿ ಕ್ಯಾಪಿಟಲ್ ಪಂದ್ಯ ರದ್ದುಪಡಿಸಲಾಗಿದೆ. ಇದೀಗ ಇಂಡಿಯಾ-ಪಾಕ್ ನಡುವೆ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿರುವ ಹಿನ್ನೆಲೆ ಇಡೀ ಟೂರ್ನಿಯನ್ನೇ ರದ್ದುಪಡಿಸಲಾಗಿದೆ. ಹಾಗೆಯೇ ಇಂದು ನಡೆಯಬೇಕಿದ್ದ ಲಕ್ಕೂ ಮತ್ತು ಆರ್‌ಸಿಬಿ ಪಂದ್ಯ ರದ್ದಾಗಿದೆ.
ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಬಿಸಿಸಿಐ ಇಂದು ಸಭೆ ನಡೆಸಿ ಈ ನಿರ್ಧಾರ ತೆಗೆದುಕೊಂಡಿದೆ. ಭಾರತ-ಪಾಕಿಸ್ತಾನ ಉದ್ವಿಗ್ನತೆಯಿಂದಾಗಿ, ಧರ್ಮಶಾಲಾದಲ್ಲಿ ನಡೆಯಬೇಕಿದ್ದ ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯವನ್ನು ಅಹಮದಾಬಾದ್‌ಗೆ ಸ್ಥಳಾಂತರಿಸಲಾಗಿತ್ತು.
ಪಂದ್ಯವು ಮೇ 11ರಂದು ನಿಗದಿಯಾಗಿಯಾಗಿತ್ತು. ಅದೇ ದಿನ ಅರುಣ್ ಜೇಟ್ಲಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಡಲ್ಲಿ ಕ್ಯಾಪಿಟಲ್ಸ್ ಮತ್ತು ಗುಜರಾತ್ ಟೈಟಾನ್ಸ್ ನಡುವಿನ ಪಂದ್ಯ ಇತ್ತು. ಆದರೆ, ಇದೀಗ
ಬಿಸಿಸಿಐ ಈ ಬಾರಿ ಇಡೀ ಐಪಿಎಲ್ ಟೂರ್ನಿಯನ್ನೇ ರದ್ದು ಮಾಡಿ ಆದೇಶ ಹೊರಡಿಸಿದೆ. ಇನ್ನೂ 16 ಪಂದ್ಯ ಉಳಿದಿರುವಾಗಲೇ ಎಲ್ಲರ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಂಡಿದೆ.




