Ad imageAd image

ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ,ಕಾಂಗ್ರೇಸ್ಸಿನಿಂದ ಪೂರ್ವಭಾವಿ ಸಭೆ

Bharath Vaibhav
ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ,ಕಾಂಗ್ರೇಸ್ಸಿನಿಂದ ಪೂರ್ವಭಾವಿ ಸಭೆ
WhatsApp Group Join Now
Telegram Group Join Now

ಸಿರುಗುಪ್ಪ : –ಈಶಾನ್ಯ ಪದವೀಧರ ಕ್ಷೇತ್ರ ವಿಧಾನ ಪರಿಷತ್ ಚುನಾವಣೆ ನಿಮಿತ್ತ ನಗರದ ಜಿ.ಎಸ್.ಲಾಡ್ಜಿನ ಸಭಾಂಗಣದಲ್ಲಿ ಕಾಂಗ್ರೇಸ್ ತಾಲೂಕು ಘಟಕದ ವತಿಯಿಂದ ನಡೆದ ಪೂರ್ವಭಾವಿ ಸಭೆ ಹಾಗೂ ರಾಜೀವ್ ಗಾಂಧೀ ಅವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಶಾಸಕ ಬಿ.ಎಮ್.ನಾಗರಾಜ ಅವರು ಜ್ಯೋತಿ ಬೆಳಗಿಸುವುದರೊಂದಿಗೆ ಉದ್ಘಾಟಿಸಿದರು.

ನಂತರ ಮಾತನಾಡಿ ತಾಲೂಕಿನ ಎಲ್ಲಾ ಕಾರ್ಯಕರ್ತರು ಹಾಗೂ ಮುಖಂಡರು ಶ್ರಮವಹಿಸಿ ಅವರಿಗೆ ಕಳೆದ ಚುನಾವಣೆಯಲ್ಲಿ ಹೆಚ್ಚಿನ ಮತಗಳನ್ನು ಕೊಟ್ಟಿದ್ದೇವೆ. ಇದು ಬುದ್ದಿವಂತರ ಚುನಾವಣೆಯಾಗಿದೆ.

ಜಾತಿ, ಮತ, ಕೋಮುದ್ವೇಷವನ್ನು ಹತ್ತಿಕ್ಕಿ ದೇಶದ ಸಮಗ್ರ ಅಭಿವೃದ್ದಿಯ ದೃಷ್ಟಿಕೋನವನ್ನು ಹೊಂದಿರುವ ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾದ ಡಾ.ಚಂದ್ರಶೇಖರ ಬಿ.ಪಾಟೀಲ್ ಅವರಿಗೆ ಮತವನ್ನು ಹಾಕುವುದರೊಂದಿಗೆ ಅವರನ್ನು ಬಹುಮತದೊಂದಿಗೆ ಗೆಲ್ಲಿಸಬೇಕು.ರಾಜ್ಯದಲ್ಲಿ ಕಾಂಗ್ರೇಸ್ ಪಕ್ಷವು ಐದು ಗ್ಯಾರಂಟಿಗಳ ಮೂಲಕ ಆಡಳಿತವನ್ನು ಒಂದು ವರ್ಷ ಪೂರೈಸಿದೆ. ಉತ್ತಮ ಆಡಳಿತದ ನಿರ್ಧಾರಗಳಿಗೆ ವಿಧಾನಪರಿಷತ್ತಿನಲ್ಲಿಯೂ ಸದಸ್ಯರ ಬಲವೂ ಅಗತ್ಯವಿದೆ. ಆದ್ದರಿಂದ ನಮ್ಮ ಅಭ್ಯರ್ಥಿಗೆ ಮಾತ್ರ ಪ್ರಾಶಸ್ತ್ಯದ ಮತ ಹಾಕಬೇಕು.

ಇದೇ ವೇಳೆ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ನಿಟ್ಟೂರು ಕರಿಬಸಪ್ಪ, ಈಶಾನ್ಯ ಪದವೀಧರ ಕ್ಷೇತ್ರದ ತಾಲೂಕು ಘಟಕದ ಅಧ್ಯಕ್ಷ ಹೆಡಗಿನಾಳ್ ವೆಂಕಟೇಶ ನಾಯಕ, ಪ್ರಧಾನ ಕಾರ್ಯದರ್ಶಿ ದೊಡ್ಡನಗೌಡ,ಮುಖಂಡರಾದ ಬಿ.ಎಮ್.ಸತೀಶ್, ಕೊಡ್ಲೆ ಮಲ್ಲಿಕಾರ್ಜುನ, ಶಫಿ ಹಾಗೂ ಇನ್ನಿತರ ಪದಾಧಿಕಾರಿಗಳು ಇದ್ದರು.

ವರದಿ.ಶ್ರೀನಿವಾಸ ನಾಯ್ಕ

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!