ಚಿಕ್ಕಬಳ್ಳಾಪುರ: ಜಿಲ್ಲೆಯ ಗುಡಿಬಂಡೆ ಬೆಸ್ಕಾಂ ಉಪ ವಿಭಾಗದಲ್ಲಿ ಜೂನಿಯರ್ ಎಂಜಿನಿಯರ್ ಹಾಗೂ ಸಿಬ್ಬಂದಿ ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ವೈರಲ್ ವೀಡಿಯೋದಲ್ಲಿ, ಎಂಜಿನಿಯರ್ ರಾಘವೇಂದ್ರ ಮತ್ತು ಸಿಬ್ಬಂದಿ ಕಚೇರಿ ಬದಲು ಡಾಬದಲ್ಲಿ ಕುಳಿತುಕೊಂಡು ಡ್ರಿಂಕ್ಸ್ ಮಾಡುತ್ತಾ, ಮದ್ಯದ ಬಾಟಲಿಗಳ ನಡುವೆ ಕುಳಿತುಕೊಂಡು ಕಡತ ವಿಲೇವಾರಿ ಮಾಡುತ್ತಿರುವುದು ಕಾಣಿಸಿದೆ.ಇದೀಗ ಬೆಸ್ಕಾಂ ಎಂಜಿನಿಯರ್ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.




