Ad imageAd image

ನಾನು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ : ಡಿ. ಕೆ ಶಿವಕುಮಾರ್ 

Bharath Vaibhav
ನಾನು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ : ಡಿ. ಕೆ ಶಿವಕುಮಾರ್ 
DKS
WhatsApp Group Join Now
Telegram Group Join Now

ಬೆಂಗಳೂರು: ನಾನು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಿರುಚಿ ಬಿಜೆಪಿ ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಗುಡುಗಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸಂವಿಧಾನ ಬದಲಾವಣೆ ಮಾಡುವ ಬಗ್ಗೆ ನಾನು ಹೇಳಿಲ್ಲ.ನನ್ನ ಹೇಳಿಕೆಯನ್ನು ಬಿಜೆಪಿ ತಿರುಚಿದೆ. ಕಳೆದ 36 ವರ್ಷಗಳಿಂದ ಶಾಸಕನಾಗಿ ವಿಧಾನಸಭೆಯಲ್ಲಿದ್ದೇನೆ.

ನನಗೂ ಸಾಮಾನ್ಯ ಜ್ಞಾನವಿದೆ. ಇಂತಹ ವಿಚಾರದಲ್ಲಿ ಜೆ.ಪಿ ನಡ್ಡಾ ಅವರಿಗಿಂತಲೂ ನಾನು ಉತ್ತಮ ಸೂಕ್ಷ್ಮತೆ ಇರುವ ರಾಜಕಾರಣಿ. ಆದರೆ ಬಿಜೆಪಿ ಜನಸಾಮಾನ್ಯರ ದಾರಿ ತಪ್ಪಿಸುತ್ತಿದೆ. ನಮ್ಮದು ರಾಷ್ಟ್ರೀಯ ಪಕ್ಷ. ಸುಳ್ಳು ಹೇಳಿಕೆ ಸೃಷ್ಟಿಸಿ, ನನ್ನ ಹೆಸರನ್ನು ಎಳೆದು ತರಲಾಗುತ್ತಿದೆ. ನಾನು ಈ ಬಗ್ಗೆ ಎಲ್ಲಿಯೂ ಹೇಳಿಕೆ ನೀಡಿಲ್ಲ ಎಂದು ತಿಳಿಸಿದರು.

ನ್ಯಾಯಾಲಯಗಳ ತೀರ್ಪಿನ ಅನುಸಾರ ತಿದ್ದುಪಡಿ ತಂದಿರುವ ನಿದರ್ಶನವಿದೆ ಎಂದು ಹೇಳಿದ್ದೇನೆಯೇ ಹೊರತು, ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಿರುಚಿರುವ ಬಗ್ಗೆ ಕಾನೂನು ಹೋರಾಟ ಮಾಡುತ್ತೇನೆ.

ನಮ್ಮದು ರಾಷ್ಟ್ರೀಯ ಪಕ್ಷ, ಸಂವಿಧಾನವನ್ನು ಜಾರಿಗೆ ತಂದಿದ್ದೇ ನಮ್ಮ ಪಕ್ಷ. ಸಂವಿಧಾನದ ಮಹತ್ವ ಬೇರೆಲ್ಲರಿಗಿಂತ ನಮಗೆ ಚೆನ್ನಾಗಿ ಗೊತ್ತಿದೆ. ಕೇಂದ್ರ ಸರ್ಕಾರ ತನ್ನ ಬಜೆಟ್ ನಲ್ಲಿ ವಿಫಲವಾಗಿದೆ.

ಬಜೆಟ್ ನಲ್ಲಿ ಏನೂ ಇಲ್ಲದೇ ಇರುವ ಕಾರಣಕ್ಕೆ ಬಿಜೆಪಿ ಈ ರೀತಿ ಇಲ್ಲಸಲ್ಲದ ವಿಚಾರವನ್ನು ಪ್ರಸ್ತಾವ ಮಾಡುತ್ತಿದೆ. ಇದೊಂದು ನನ್ನ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಮುಂದುವರೆದಿರುವ ರಾಜಕೀಯ ಪಿತೂರಿ ಎಂದರು.

ಬಿಜೆಪಿಯ ಅಮಿತ್ ಮಾಳವಿಯಾ ರಾಜಕೀಯ ವ್ಯಕ್ತಿಯಾಗಿ ಇಡೀ ದೇಶವನ್ನು ತಪ್ಪು ಹಾದಿಗೆ ಎಳೆಯುತ್ತಿದ್ದಾರೆ. ಬಿಜೆಪಿ ಯಾವಾಗಲೂ ದೇಶವನ್ನು ತಪ್ಪು ಹಾದಿಗೆ ಎಳೆಯುವ ಕೆಲಸ ಮಾಡುತ್ತಲೇ ಬಂದಿದೆ.

ನಾನು ಎಲ್ಲಿ ಸಂವಿಧಾನ ಬದಲಾವಣೆ ಮಾಡುತ್ತೇನೆ ಎಂದು ಹೇಳಿದ್ದೇನೆ ಎಂದು ತೋರಿಸಲಿ. ಬಿಜೆಪಿಯವರು ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದಾರೆ.

ಅವರಿಗೆ ನನ್ನ, ಸೋನಿಯಾ ಗಾಂಧಿ ಅವರ ಕುಟುಂಬದ ಹಾಗೂ ಕಾಂಗ್ರೆಸ್ ಪಕ್ಷದ ಹೆಸರು ತೆಗೆದುಕೊಳ್ಳದಿದ್ದರೆ ನಿದ್ದೆ ಬರುವುದಿಲ್ಲ ಎಂದು ಕಿಡಿಕಾರಿದರು. ಬಿಜೆಪಿ ಕೆಲಸವೇ ನಕಲಿ ಹಾಗೂ ಸುಳ್ಳು ಸುದ್ದಿಗಳನ್ನು ಪಸರಿಸುವುದು. ಇದರಲ್ಲಿ ಅವರದು ಎತ್ತಿದ ಕೈ ಎಂದು ವಾಗ್ದಾಳಿ ನಡೆಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!