Ad imageAd image

ಬಾಗಲಕೋಟೆಗೆ ಉಮೇಶ್ ಮೇಟಿ ಮತ್ತು ದಾವಣಗೆರೆ ಸಮರ್ಥ್ ಮಲ್ಲಿಕಾರ್ಜುನ್ ಗೆ ಟಿಕೆಟ್ 

Bharath Vaibhav
ಬಾಗಲಕೋಟೆಗೆ ಉಮೇಶ್ ಮೇಟಿ ಮತ್ತು ದಾವಣಗೆರೆ ಸಮರ್ಥ್ ಮಲ್ಲಿಕಾರ್ಜುನ್ ಗೆ ಟಿಕೆಟ್ 
WhatsApp Group Join Now
Telegram Group Join Now

ಬೆಂಗಳೂರು : ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಮೇಶ್ ಮೇಟಿ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಸಮರ್ಥ್ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ನೀಡಲಾಗಿದೆ.

ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆಯ ದಿನವಾಗಿದ್ದು, ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಹೆಸರು ಅಧಿಕೃತವಾಗಿ ಪ್ರಕಟಿಸಲಾಗಿದೆ.

ನಿನ್ನೆಯೇ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಿ ಬಿ ಫಾರಂ ನೀಡಲಾಗಿದ್ದು, ಇಂದು ಎಐಸಿಸಿಯಿಂದ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್ ನೀಡಬಾರದು, ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕೆಂಬ ಒತ್ತಾಯ ಕೇಳಿ ಬಂದಿತ್ತು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರಣಿ ಸಭೆಗಳನ್ನು ನಡೆಸಿ, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದಾರೆ.

ಈ ಬಾರಿ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಹಲವು ಮುಖಂಡರು ಪಟ್ಟು ಹಿಡಿದಿದ್ದರು. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೇರಿದಂತೆ ಹಲವು ನಾಯಕರು ಶಾಮನೂರು ಶಿವಶಂಕರಪ್ಪ ಪ್ರತಿನಿಧಿಸಿದ್ದ ಕ್ಷೇತ್ರದಲ್ಲಿ ಅವರ ಮೊಮ್ಮಗ ಸಮರ್ಥ್ ಗೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದರು.

ಹೀಗಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿತ್ತು. ಎರಡು ಗುಂಪುಗಳ ಪ್ರಮುಖರ ಸಭೆ ನಡೆಸಿದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮತ್ತು ಸುರ್ಜೇವಾಲಾ ಅಂತಿಮವಾಗಿ ಮುಸ್ಲಿಂ ಸಮುದಾಯದ ಮುಖಂಡರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಾಗಲಕೋಟೆ ಕ್ಷೇತ್ರದಲ್ಲಿ ಹೆಚ್.ವೈ. ಮೇಟಿ ಪುತ್ರ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಲಾಗಿದೆ. ಮೇಟಿಯವರ ಕುಟುಂಬ ಸದಸ್ಯರ ನಡುವೆ ಟಿಕೆಟ್ ಗಾಗಿ ಪೈಪೋಟಿ ಇತ್ತು. ಸಿಎಂ ಮತ್ತು ಡಿಸಿಎಂ ಮೇಟಿ ಕುಟುಂಬದವರೊಂದಿಗೆ ಚರ್ಚಿಸಿ ಉಮೇಶ್ ಮೇಟಿಗೆ ಟಿಕೆಟ್ ನೀಡಲು ಅಂತಿಮಗೊಳಿಸಿದ್ದಾರೆ.

 

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!