ಚಾಮರಾಜನಗರ: ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಪ್ರೇಮಿಗಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.
ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಕ್ಕೆ ಮನನೊಂದ ನಾದಿಯಾ (19) ಹಾಗೂ ನಾಗೇಂದ್ರ (21) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು. ಮಲೆ ಮಹದೇಶ್ವರ ಬೆಟ್ಟದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




