Ad imageAd image

ಮಾ. 6ಕ್ಕೆ ವಿಶೇಷ ಸಚಿವ ಸಂಪುಟ ಸಭೆ ಕರೆದ ರಾಜ್ಯ ಸರ್ಕಾರ

Bharath Vaibhav
ಮಾ. 6ಕ್ಕೆ ವಿಶೇಷ ಸಚಿವ ಸಂಪುಟ ಸಭೆ ಕರೆದ ರಾಜ್ಯ ಸರ್ಕಾರ
vidhana soudha
WhatsApp Group Join Now
Telegram Group Join Now

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯವನ್ನು (ಬಜೆಟ್) ಅನುಮೋದಿಸಲು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಬರುವ ಶುಕ್ರವಾರ, ಅಂದರೆ ಮಾರ್ಚ್ 06, 2026ರಂದು ಬೆಳಿಗ್ಗೆ 9:45ಕ್ಕೆ ಸಚಿವ ಸಂಪುಟದ ವಿಶೇಷ ಸಭೆಯನ್ನು ಕರೆಯಲಾಗಿದೆ.

ಬೆಂಗಳೂರಿನ ವಿಧಾನ ಸೌಧದ ಮೂರನೇ ಮಹಡಿಯಲ್ಲಿರುವ ಸಚಿವ ಸಂಪುಟ ಸಭಾಮಂದಿರದಲ್ಲಿ ಈ ಮಹತ್ವದ ಸಭೆ ನಡೆಯಲಿದೆ.

ಈ ಕುರಿತು ಸರ್ಕಾರದ ಅಪರ ಕಾರ್ಯದರ್ಶಿ (ಸಚಿವ ಸಂಪುಟ) ಆರ್. ಚಂದ್ರಶೇಖರ್ ಅವರು ಮಂಗಳವಾರ ಅಧಿಕೃತ ಸೂಚನಾ ಪತ್ರವನ್ನು ಹೊರಡಿಸಿದ್ದಾರೆ.

ಬಜೆಟ್ ಮೇಲೆ ಕುತೂಹಲ

ರಾಜ್ಯದ ಆರ್ಥಿಕ ಅಭಿವೃದ್ಧಿ ಹಾಗೂ ಮುಂಬರುವ ವರ್ಷದ ಯೋಜನೆಗಳ ದೃಷ್ಟಿಯಿಂದ ಈ ಬಜೆಟ್ ಅತ್ಯಂತ ಮಹತ್ವದ್ದಾಗಿದೆ.

ಸಭೆಯಲ್ಲಿ ಮುಖ್ಯಮಂತ್ರಿಗಳು ಮಂಡಿಸಲಿರುವ ಆಯವ್ಯಯದ ಪ್ರಸ್ತಾವನೆಗಳಿಗೆ ಸಚಿವ ಸಂಪುಟವು ಅಧಿಕೃತ ಮುದ್ರೆ ಒತ್ತಲಿದೆ. ಈ ಸಭೆಗೆ ರಾಜ್ಯದ ಎಲ್ಲಾ ಸಚಿವರು ಕಡ್ಡಾಯವಾಗಿ ಹಾಜರಿ ಸೂಚಿಸಲಾಗಿದೆ.

ಈ ವಿಶೇಷ ಸಭೆಯ ಹಿನ್ನೆಲೆಯಲ್ಲಿ ವಿಧಾನ ಸೌಧದ ಭದ್ರತೆ ಹಾಗೂ ಆಡಳಿತಾತ್ಮಕ ಸಿದ್ಧತೆಗಳಿಗಾಗಿ ವಿವಿಧ ಇಲಾಖೆಗಳಿಗೆ ಮಾಹಿತಿಯನ್ನು ರವಾನಿಸಲಾಗಿದೆ. ಶುಕ್ರವಾರ ಬೆಳಿಗ್ಗೆ ಬಜೆಟ್ ಅನುಮೋದನೆಗೊಂಡ ಬೆನ್ನಲ್ಲೇ, ಸರ್ಕಾರವು ತನ್ನ ಮುಂದಿನ ಆರ್ಥಿಕ ಗುರಿಗಳನ್ನು ಸದನದ ಮುಂದಿಡಲಿದೆ.

 

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!