ಗದಗ: ತಾಲೂಕಿನ ಹೊಸೂರು ಗ್ರಾಮದಲ್ಲಿ ಸಿಲಿಂಡರ್ ಸ್ಪೋಟಗೊಂಡು ದುರಂತ ಸಂಭವಿಸಿದ್ದು, ಘಟನೆಯಲ್ಲಿ 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸಿಲಿಂಡರ್ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡ 6 ಜನರ ಪೈಕಿ 14 ವರ್ಷದ ಬಾಲಕ ಕೂಡ ಸೇರಿದ್ದಾನೆ ಎಂದು ತಿಳಿದುಬಂದಿದೆ.ಬಸಪ್ಪ ಆದಿವರ್ ಎಂಬವರ ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, ಗಂಭೀರವಾದ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಲಕ್ಷ್ಮವ್ವ ಕಣವಿ, ಬಸವಣ್ಣೆವ್ವ ಹೊರಪೇಟಿ, ಮಂಜುಳಾ, ನಿರ್ಮಲ ಹಾಗೂ ಶರಣಪ್ಪಗೆ ಗಾಯಗಳಾಗಿದ್ದು ತಕ್ಷಣ ಅವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ವೇಳೆ ಫೋನ್ ಮಾಡಿದರು ಕೂಡ ಆಂಬುಲೆನ್ಸ್ ಮತ್ತು ಅಗ್ನಿಶಾಮಕ ದಳ ಘಟನಾ ಸ್ಥಳಕ್ಕೆ ಬಂದಿಲ್ಲ ಎಂದು ಆರೋಪ ಕೇಳಿ ಬಂದಿದೆ. ಘಟನೆ ಕುರಿತು ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.