ಅಹಮದಾಬಾದ್ : ಗುಜರಾತ್‌ನ ರಾಜಧಾನಿ ಅಹಮದಾಬಾದ್‌ನಲ್ಲಿ ಇಂದು ಮಧ್ಯಾಹ್ನ ಏರ್ ಇಂಡಿಯಾ ವಿಮಾನ ಪತನವಾಗಿದ್ದು, 241 ಜನರು ಮೃತಪಟ್ಟಿದ್ದಾರೆ.
ಆದ್ದರಿಂದ ಏರ್ ಇಂಡಿಯಾ ಮಾಲೀಕತ್ವ ಹೊಂದಿರುವ ಟಾಟಾ ಗ್ರೂಪ್ ಮೃತರ ಕುಟುಂಬಕ್ಕೆ ತಲಾ 1 ಕೋಟಿ ರೂಪಾಯಿ ಪರಿಹಾರವನ್ನು ಘೋಷಿಸಿದೆ.
ಟಾಟಾ ಗ್ರೂಪ್ ಮಾಧ್ಯಮ ಪ್ರಕಟಣೆ ಹೊರಡಿಸಿ ವಿಮಾನ ದುರಂತ ಘಟನೆಯಿಂದ ನಾವು ತೀವ್ರ ದುಃಖಿತರಾಗಿದ್ದೇವೆ ಎಂದು ತಿಳಿಸಿದೆ. ಈ ದುಃಖವನ್ನು ಪದಗಳಲ್ಲಿ ವ್ಯಕ್ತಪಡಿಸಲು ಸಾಧ್ಯವಿಲ್ಲ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ಮತ್ತು ಗಾಯಗೊಂಡವರ ಜೊತೆ ನಮ್ಮ ಪ್ರಾರ್ಥನೆಗಳಿವೆ.
ಈ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರತಿಯೊಬ್ಬ ವ್ಯಕ್ತಿಯ ಕುಟುಂಬಗಳಿಗೆ ಟಾಟಾ ಗ್ರೂಪ್ ₹1 ಕೋಟಿ ನೀಡುತ್ತದೆ. ಗಾಯಗೊಂಡವರ ವೈದ್ಯಕೀಯ ವೆಚ್ಚವನ್ನು ಸಹ ನಾವು ಭರಿಸುತ್ತೇವೆ.
ಅವರಿಗೆ ಅಗತ್ಯವಿರುವ ಎಲ್ಲಾ ಆರೈಕೆ ಮತ್ತು ಬೆಂಬಲವನ್ನು ನೀಡುತ್ತೇವೆ. ಈ ದುಖದ ಸಮಯದಲ್ಲಿ ನೊಂದ ಕುಟುಂಬಗಳ ಬೆಂಬಲಕ್ಕೆ ನಿಲ್ಲುತ್ತೇವೆ ಎಂದು ಭರವಸೆ ನೀಡಿದೆ.