ಬೆಂಗಳೂರು : ಕೆಲ ದಿನಗಳ ಹಿಂದೆ ಯೂಟ್ಯೂಬರ್ ಸಮೀರ್ MD ಅವರು ವಿದ್ಯಾರ್ಥಿನಿ ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣ ಸಂಬಂಧ ಪರೋಕ್ಷವಾಗಿ ಕಥೆ ರೂಪದಲ್ಲಿ ವಿಡಿಯೋವೊಂದನ್ನು ಹರಿಬಿಟ್ಟಿದ್ದು ಭಾರೀ ಸಂಚಲ ಮೂಡಿಸಿತ್ತು.
ಆ ವಿಡಿಯೋ ತೀವ್ರ ವಿವಾದಕ್ಕೆ ಕಾರಣವಾದ ಬಳಿಕ ತೆಗೆದುಹಾಕಲಾಗಿದ್ದು, ಕೋರ್ಟ್ ಆದೇಶ ಉಲ್ಲಂಘಿಸಿ ಸೌಜನ್ಯ ಪ್ರಕರಣ ಕುರಿತಂತೆ ಇದೀಗ 2ನೇ ವಿಡಿಯೋ ಬಿಟ್ಟಿರುವ ಆರೋಪದಡಿ ದೂತ ಎಂಬ ಹೆಸರಿನ ಯೂಟ್ಯೂಬರ್ ಸಮೀರ್ ವಿರುದ್ಧ ರೂ.10 ಕೋಟಿ ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಲಾಗಿದೆ.
ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ಮತ್ತು ನಿಶ್ಚಲ್ ಡಿ. ಎಂಬುವವರು ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದಾರೆ. ನ್ಯಾಯಾಲಯವು ಸಮೀರ್ಗೆ ನೋಟೀಸ್ ಸಹ ಜಾರಿ ಮಾಡುವ ಮೂಲಕ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ಇದಲ್ಲದೇ ಆದೇಶ ಉಲ್ಲಂಘಿಸಿ ಹರಿಬಿಟ್ಟಿರುವ ವಿಡಿಯೋ ತಕ್ಷಣವೇ ಡಿಲೀಟ್ ಮಾಡಬೇಕು ಎಂದೂ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ ಎಂದು ತಿಳಿದುಬಂದಿದೆ.