ಗೃಹಲಕ್ಷ್ಮೀ ಯೋಜನೆ (Gruha Lakshmi Scheme) ಕರ್ನಾಟಕದ ಮಹಿಳೆಯರಿಗೆ ವರದಾನವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಜಾರಿಗೆ ತಂದ ಗೃಹಲಕ್ಷ್ಮೀ ಯೋಜನೆ ಮೂಲಕ ಪ್ರತೀ ಕುಟುಂಬದ ಯಜಮಾನಿಗೆ ಪ್ರತೀ ತಿಂಗಳು 2000 ರೂಪಾಯಿಯನ್ನು ನೀಡಲಾಗುತ್ತಿದೆ.
ಇದೀಗ ಪಂಚರಾಜ್ಯ ಚುನಾವಣೆಯ ಹೊತ್ತಲ್ಲೇ ಕಾಂಗ್ರೆಸ್ ಮಹಾಲಕ್ಷ್ಮೀ ಯೋಜನೆಯನ್ನು (Mahalakshmi Scheme) ಘೋಷಣೆ ಮಾಡಿದೆ. ಹಿಂದುಳಿದ ವರ್ಗಗಳ ಯುವತಿರಿಗೆ ನೆರವಾಗುವ ನಿಟ್ಟಿನಲ್ಲಿ ಮಹಾಲಕ್ಷ್ಮೀ ಯೋಜನೆಯನ್ನು ಘೋಷಣೆ ಮಾಡಲಾಗಿದೆ. ಈ ಯೋಜನೆಯ ಮೂಲಕ ಯುವತಿಯರಿಗೆ ಮದುವೆಯ ಸಂದರ್ಭದಲ್ಲಿ 10 ಗ್ರಾಂ ಚಿನ್ನದ ಜೊತೆಗೆ 1 ಲಕ್ಷ ರೂಪಾಯಿಯನ್ನು ಉಚಿತವಾಗಿ ನೀಡುವುದಾಗಿ ಘೋಷಣೆಯನ್ನು ಮಾಡಿದೆ. ಒಂದೊಮ್ಮೆ ಈ ಯೋಜನೆಯನ್ನು ಜಾರಿಗೆ ತರಲು ಸದ್ಯ 250 ಕೋಟಿ ರೂಪಾಯಿ ಬಂಡವಾಳದ ಅಗತ್ಯವಿದೆ. ಅಂದಹಾಗೆ ಈ ಯೋಜನೆಯನ್ನು ಜಾರಿಗೆ ತರುತ್ತಿರುವುದು ಕರ್ನಾಟಕದಲ್ಲಿ ಅಲ್ಲ ಬದಲಾಗಿ ತೆಲಂಗಾಣದಲ್ಲಿ. ಜೊತೆಗೆ ತೆಲಂಗಾಣ ಕಾಂಗ್ರೆಸ್ ಘೋಷಣೆ ಮಾಡಿರುವ ಯೋಜನೆಯ ಕುರಿತು ಅಪಸ್ವರ ಕೇಳಿಬಂದಿದೆ. ಇಷ್ಟೇ ಅಲ್ಲಾ ತೆಲಂಗಾಣ ಕಾಂಗ್ರೆಸ್ ಸರಕಾರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ರೆ ಮಹಿಳೆಯರಿಗೆ ಮಹಾಲಕ್ಷ್ಮೀ ಯೋಜನೆ ಜಾರಿಗೊಳಿಸುವುದಾಗಿ ಈಗಾಗಲೇ ಘೋಷಣೆಯನ್ನು ಮಾಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಘೋಷಣೆ ಮಾಡಿದಂತೆ ಈಗಾಗಲೇ ತೆಲಂಗಾಣದಲ್ಲಿ ಕಾಂಗ್ರೆಸ್ ಪಕ್ಷ ಮಹಿಳೆಯರಿಗಾಗಿ ಹಲವು ಯೋಜನೆ ಘೋಷಿಸಿದೆ.