ಹುಬ್ಬಳ್ಳಿ : ಇಂದು ಹುಬ್ಬಳಿಯಲ್ಲಿ ನಡೆದ ಹೀನ ಕೃತ್ಯದಲ್ಲಿ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಲು ಯತ್ನಿಸಿ ನಂತರ ಕೊಲೆಗೈದ ಆರೋಪಿ ಬಿಹಾರಿ ಮೂಲದ ವ್ಯಕ್ತಿಯನ್ನು ಈಗಾಗಲೇ ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ.
ಇನ್ನು ಮೃತ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ಘೋಷಣೆ ಮಾಡಲಾಗಿದ್ದು,10 ಲಕ್ಷ ರೂಪಾಯಿ ಯನ್ನು ಪರಿಹಾರವಾಗಿ ನೀಡೋದಾಗಿ ಸರ್ಕಾರದ ಪರವಾಗಿ ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಮ್ ಅಹ್ಮದ್ ಮಾಹಿತಿ ನೀಡಿದ್ದಾರೆ.
ಇಂದು ಹುಬ್ಬಳ್ಳಿಯ ಅಧ್ಯಾಪಕ ನಗರದಲ್ಲಿ ಮನೆಯ ಮುಂದೆ ಗೇಟ್ ಬಳಿ ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನು ಹೊತ್ತೊಯ್ದಿದ್ದ ಆರೋಪಿ ಅಲ್ಲಿಂದ ಸ್ವಲ್ಪ ದೂರದಲ್ಲಿದ್ದ ಶೀಟ್ ಮನೆಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿದ್ದ.




