Ad imageAd image

ಜಮ್ಮು ಮತ್ತು ಕಾಶ್ಮೀರ ಸೇನಾ ವಾಹನ ಪಲ್ಟಿ : 10 ಸೈನಿಕರು ದಾರುಣ ಸಾವು 

Bharath Vaibhav
ಜಮ್ಮು ಮತ್ತು ಕಾಶ್ಮೀರ ಸೇನಾ ವಾಹನ ಪಲ್ಟಿ : 10 ಸೈನಿಕರು ದಾರುಣ ಸಾವು 
WhatsApp Group Join Now
Telegram Group Join Now

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭಾರತೀಯ ಸೇನಾ ವಾಹನವೊಂದು ಕಂದಕಕ್ಕೆ ಉರುಳಿದ್ದು, 10 ಮಂದಿ ಸೈನಿಕರು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. 9 ಮಂದಿ ಗಾಯಗೊಂಡಿದ್ದಾರೆ.

ವಾಹನವು ರಸ್ತೆಯಿಂದ ಜಾರಿ ಆಳವಾದ ಕಂದಕಕ್ಕೆ ಉರುಳಿಬಿದ್ದಿದೆ. ಭದೇರ್ವಾ-ಚಂಬಾ ಅಂತಾರಾಜ್ಯ ರಸ್ತೆಯ ಖನ್ನಿ ಟಾಪ್‌ನಲ್ಲಿ ಈ ಅಪಘಾತ ಸಂಭವಿಸಿದೆ.

ಒಟ್ಟು 17 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸೇನಾ ವಾಹನವು ಎತ್ತರದ ಪೋಸ್ಟ್ ಕಡೆಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಕಂದಕಕ್ಕೆ ಉರುಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೇನೆ ಮತ್ತು ಪೊಲೀಸರು ಜಂಟಿ ರಕ್ಷಣಾ ಕಾರ್ಯಾಚರಣೆಯನ್ನು ತಕ್ಷಣವೇ ಆರಂಭಿಸಿದಾಗ ನಾಲ್ವರು ಸೈನಿಕರು ಮೃತಪಟ್ಟಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡಿದ್ದ ಇತರ ಒಂಬತ್ತು ಸೈನಿಕರನ್ನು ರಕ್ಷಿಸಲಾಗಿದೆ ಮತ್ತು ಅವರಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ವಿಶೇಷ ಚಿಕಿತ್ಸೆಗಾಗಿ ಉಧಮ್‌ಪುರ ಮಿಲಿಟರಿ ಆಸ್ಪತ್ರೆಗೆ ಹೆಲಿಕಾಪ್ಟರ್ ಮೂಲಕ ಸಾಗಿಸಲಾಗಿದೆ ಎಂದು ಅವರು ಹೇಳಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!