Join The Telegram | Join The WhatsApp |
ಬೆಂಗಳೂರು: ಉತ್ತರ ಕರ್ನಾಟಕದ ಮೂರು ಜಿಲ್ಲೆಗಳ ತೊಗರಿ ಬೆಳೆಗಾರರ ಸಂಕಷ್ಟಕ್ಕೆ ಸರ್ಕಾರ ಧಾವಿಸಿದ್ದು, ನೆಟೆ ರೋಗದಿಂದ ನಾಶವಾದ ತೊಗರಿ ಬೆಳೆಗೆ ವಿಶೇಷ ಪ್ರಕರಣದ ಆಧಾರದಲ್ಲಿ ಹೆಕ್ಟೇರ್ಗೆ 10 ಸಾವಿರದಂತೆ ಗರಿಷ್ಠ 20 ಸಾವಿರಕ್ಕೆ ಸೀಮಿತಗೊಳಿಸಿ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದು, ಒಟ್ಟು ಪರಿಹಾರ ಮೊತ್ತವು 223 ಕೋಟಿಯೆಂದು ಅಂದಾಜಿಸಿ ಪರಿಹಾರ ಬಿಡುಗಡೆಗೆ ನಿರ್ಧಾರ ಮಾಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಲಬುರಗಿ ಜಿಲ್ಲಾ ಪ್ರವಾಸದಿಂದ ಹಿಂತಿರುಗಿದ ನಂತರ ಗೃಹ ಕಚೇರಿ ಕೃಷ್ಣಾದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ನೆಟೆ ರೋಗದಿಂದ ತೊಗರಿ ಬೆಳೆಗೆ ಸಂಭವಿಸಿದ ಬೆಳೆಹಾನಿಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಸರ್ಕಾರವು ಪ್ರತಿ ಹೆಕ್ಟೇರ್ ಗೆ 10 ಸಾವಿರ ರೂ. ಗಳಂತೆ ಎನ್ಡಿಆರ್ಎಫ್ / ಎಸ್ಡಿಆರ್ಎಫ್ ಮಾರ್ಗಸೂಚಿಯಂತೆ ಗರಿಷ್ಠ 2 ಹೆಕ್ಟೇರ್ಗೆ ಸೀಮಿತಗೊಳಿಸಿ ಬಾಧಿತ ರೈತರಿಗೆ ಪರಿಹಾರ ಘೋಷಿಸುವ ನಿರ್ಧಾರ ಪ್ರಕಟಿಸಿದರು.
Join The Telegram | Join The WhatsApp |