ಬೆಂಗಳೂರು : ಭ್ರೂಣ ಲಿಂಗ ಪತ್ತೆ ಶಿಕ್ಷಾರ್ಹ ಅಪರಾಧ, ಉಲ್ಲಂಘಿಸಿದರೆ ಮೂರು ವರ್ಷಗಳ ಜೈಲು ಶಿಕ್ಷೆ ಜೊತೆಗೆ ₹10,000 ದವರೆಗೆ ದಂಡ ವಿಧಿಸಲಾಗುತ್ತದೆ.
ಹೌದು, ಗರ್ಭ ಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆ 1994ರ ಪ್ರಕಾರ ಭ್ರೂಣ ಲಿಂಗ ಪತ್ತೆಯು ಶಿಕ್ಷಾರ್ಹ ಅಪರಾಧವಾಗಿದೆ.
ಭ್ರೂಣ ಲಿಂಗ ಪತ್ತೆ, ಭ್ರೂಣ ಲಿಂಗ ಆಯ್ಕೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಜಾಹೀರಾತುಗಳನ್ನು ನೀಡುವಂತಿಲ್ಲ. ಉಲ್ಲಂಘಿಸಿದರೆ ಮೂರು ವರ್ಷಗಳ ಜೈಲು ಶಿಕ್ಷೆ ಜೊತೆಗೆ ₹10,000 ದವರೆಗೆ ದಂಡ ವಿಧಿಸಲಾಗುತ್ತದೆ.