ಬೆಂಗಳೂರು : ಕೊರೊನಾ ವೈರಸ್ ತನ್ನ ಆರ್ಭಟ ಮುಂದುವರಿಸಿದ್ದು, ರಾಜ್ಯದಲ್ಲಿ ಇಂದು ಹೊಸದಾಗಿ 114 ಕೋವಿಡ್ ಪಾಸಿಟಿವ್ ಕೇಸ್ ಗಳು ವರದಿಯಾಗಿವೆ.
ರಾಜ್ಯ ಆರೋಗ್ಯ ಇಲಾಖೆಯ ದೈನಂದಿನ ಹೆಲ್ತ್ ಬುಲೆಟಿನ್ ಮಾಹಿತಿ ಪ್ರಕಾರ, ಪಾಸಿಟಿವಿಟಿ ರೇಟ್ ಶೇ.10 ರಿಂದ 24.7ಕ್ಕೆ ಏರಿಕೆ ಕಂಡಿದೆ.
ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 234ಕ್ಕೆ ಏರಿಕೆಯಾಗಿದೆ. ಇನ್ನು ಸೋಂಕಿನಿಂದ ಇಂದೇ 27 ಜನ ಗುಣಮುಖರಾಗಿದ್ದಾರೆ.
ಕೋವಿಡ್ ಸೋಂಕಿಗೆ ಈ ದಿನ ರಾಜ್ಯದಲ್ಲಿ ಮತ್ತೊಂದು ಸಾವು ಸಂಭವಿಸಿದ್ದು, ಈ ಮೂಲಕ ಮೃತಪಟ್ಟವರ ಸಂಖ್ಯೆ ಮೂರಕ್ಕೇರಿಕೆಯಾಗಿದೆ.
234 ಸೋಂಕಿತರಲ್ಲಿ 224 ಜನರಿಗೆ ಹೋಂ ಐಸೋಲೇಷನ್ ಮಾಡಲಾಗಿದ್ದು, 11 ಜನ ಸೋಂಕಿತರಿಗೆ ಮಾತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
ರಾಜ್ಯದಲ್ಲಿ ಏಕಾಏಕಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ದುಪ್ಪಟ್ಟು ಏರಿಕೆ ಕಂಡಿದ್ದು ಆತಂಕಕ್ಕೆ ಕಾರಣವಾಗಿದೆ.