ಬೆಂಗಳೂರು : ಕಾಂಗ್ರೆಸ್ ಸರ್ಕಾರ ಕೂಡಲೇ ಒಳ ಮೀಸಲಾತಿ ಜಾರಿ ಮಾಡಿ ಇಲ್ಲ ಅಂದ್ರೆ ಖುರ್ಚಿ ಖಾಲಿ ಮಾಡಿ ಎಂದು ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ಎಸ್. ಸಿ. ಮೋರ್ಚಾ ಅಧ್ಯಕ್ಷ ಬಿ. ಶ್ರೀನಿವಾಸಯ್ಯ ಕಾಂಗ್ರೆಸ್ ಸರ್ಕಾರಕ್ಕೆ ತರಾಟೆಗೆ ತೆಗೆದುಕೊಂಡರು.
ಬೆಂಗಳೂರು ಆದಿ ಜಾಂಬವ ಮಾದಿಗ ಮಹಾಸಭಾ, ಮಾದಿಗ ಮತ್ತು ಮಾದಿಗ ಉಪ ಜಾತಿಗಳ ಸಂಘಟನೆಗಳ ಒಕ್ಕೂಟದ ಮುಖಂಡರು ಮಹಿಳೆಯರು ಕಾರ್ಯಕರ್ತರು ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಆರ್ ವಿಶ್ವನಾಥ್ ಅವರಿಗೆ ಕುಂದಾನಗರಿ ಬೆಳಗಾವಿಯ ಸುವರ್ಣ ಸೌಧ ಮುಂಭಾಗದಲ್ಲಿ ಮನವಿ ಸಲ್ಲಿಸಿ ಆಗಸ್ಟ್ 1ರಂದು ಸುಪ್ರೀಂ ಕೋರ್ಟ್ ಸಂವಿಧಾನ ಪೀಠ ಆಯಾ ರಾಜ್ಯಗಳಿಗೆ ನೀಡಿರುವ ಐತಿಹಾಸಿಕ ತೀರ್ಪು ನೀಡಿದೆ. ತೀರ್ಪು ಹೊರಬಿದ್ದು ನಾಲ್ಕು ತಿಂಗಳು ಕಳೆದರೂ ಕರ್ನಾಟಕ ಕಾಂಗ್ರೆಸ್ ಸರ್ಕಾರ ಬೇಕಾ ಬಿಟ್ಟಿಗಾಗಿ ನಿವೃತ್ತ ನ್ಯಾಯಮೂರ್ತಿ ಎಚ್.ಎನ್ ನಾಗ್ ಮೋಹನ್ ದಾಸ್ ಆಯೋಗ ರಚಿಸಿದ್ದು ಬಿಟ್ಟರೆ ಎನನ್ನೂ ಮಾಡಿಲ್ಲಾ ಕಾಂಗ್ರೆಸ್ ಸರ್ಕಾರ ಕೈಕಟ್ಟಿ ಕುಳಿತಿದೆ ಎಂದು ಮಂಡಲ ಬಿಜೆಪಿ ಎಸ್ ಸಿ ಮೋರ್ಚಾ ಅಧ್ಯಕ್ಷ ಬಿ.ಶ್ರೀನಿವಾಸಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಯಲಹಂಕ ಗ್ರಾಮಾಂತರ ಮಂಡಲ ಬಿಜೆಪಿ ಎಸ್. ಸಿ. ಮೋರ್ಚಾ ನಿಕಟಪೂರ್ವ ಅಧ್ಯಕ್ಷ ಲಿಂಗನಹಳ್ಳಿ ವೆಂಕಟೇಶ್,ಹಾಲಿ ಪ್ರದಾನ ಕಾರ್ಯದರ್ಶಿ ಮುನಿರಾಜು, ದಲಿತ ಸಂಘಟನೆಗಳ ಗೌರವಾಧ್ಯಕ್ಷ ಲಿಂಗಯ್ಯ, ಆದಿ ಜಾಂಬವ ಮಾದಿಗ ಮಹಾಸಭಾದ ಅಧ್ಯಕ್ಷರು ಪದಾಧಿಕಾರಿಗಳು ಸದಸ್ಯರು ಮತ್ತು ಸಮಾಜದ ಹಿರಿಯ ಮುಖಂಡರು ಮಹಿಳೆಯರು ಕಾರ್ಯಕರ್ತರು ಮುಂತಾದವರು ಇದ್ದರು.
ವರದಿ:ಅಯ್ಯಣ್ಣ ಮಾಸ್ಟರ್