ಬೆಂಗಳೂರು: ಅಶ್ಲೀಲ ಸಂದೇಶ ಕಳುಹಿಸಿದ ಒಂದೇ ಒಂದು ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನನ್ನು ಹತ್ಯೆಗೈದು, ಮೋರಿಗೆ ಶವವನ್ನು ಎಸೆಯಲಾಗಿತ್ತು.
ಈ ಪ್ರಕರಣ ಸಂಬಂಧ ನಟ ದರ್ಶನ್ ಸೇರಿದಂತೆ 13 ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ನಟ ದರ್ಶನ್ ಸೇರಿ 13 ಮಂದಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಪೊಲೀಸರು ಹಾಜರುಪಡಿಸಿದರು.ಅವರಿಗೆ 7 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.
ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಎಂಬಾತ ನಟ ದರ್ಶನ್ ಸ್ನೇಹಿತೆ ಪವಿತ್ರಾ ಗೌಡಗೆ ಅಶ್ಲೀಸ ಸಂದೇಶ ಕಳುಹಿಸುತ್ತಿದ್ದನಂತೆ. ಅಲ್ಲದೇ ನಟ ದರ್ಶನ್ ಬಗ್ಗೆಯೂ ಬಗ್ಗೆಯೂ ಕೆಟ್ಟದಾಗಿ ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಕೂಡ ಹಾಕುತ್ತಿದ್ದನಂತೆ. ಇದೇ ಕಾರಣಕ್ಕೆ ಅನೇಕ ಬಾರಿ ನಟ ದರ್ಶನ್ ಸೇರಿದಂತೆ ಅವರ ಅಭಿಮಾನಿಗಳು ರೇಣುಕಾಸ್ವಾಮಿಗೆ ಎಚ್ಚರಿಸಿದ್ದರು.
ಆದ್ರೇ ರೇಣುಕಾಸ್ವಾಮಿ ಮಾತ್ರ ತನ್ನ ಚಾಳಿಯನ್ನು ಮುಂದುವರೆಸಿದ್ದನು ಎನ್ನಲಾಗಿದೆ. ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದಂತ ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಕಿಡ್ನ್ಯಾಪ್ ಮಾಡಿಕೊಂಡು ಬಂದು, ಬೆಂಗಳೂರಿನ ಶೆಡ್ ಒಂದರಲ್ಲಿ ಕೂಡಿ ಹಾಕಿ. ಆತನ ಮೇಲೆ ಹಲ್ಲೆ ಮಾಡಲಾಗಿದೆ ಎಂಬುದಾಗಿ ತಿಳಿದು ಬಂದಿದೆ. ರಾಡ್ ನಿಂದ ಬಲವಾಗಿ ತಲೆಗೆ ಹೊಡೆದ ಪರಿಣಾಮ, ಆತ ಶೆಡ್ ನಲ್ಲೇ ಸಾವನ್ನಪ್ಪಿದ್ದನಂತೆ.
ಮೃತ ಪಟ್ಟಿದ್ದಂತ ರೇಣುಕಾಸ್ವಾಮಿಯನ್ನು ಸಮೀಪದ ಮೋರಿಯೊಂದಕ್ಕೆ ಮೂಟೆಕಟ್ಟಿ ಆರೋಪಿಗಳು ಎಸೆದು ಹೋಗಿದ್ದರಂತೆ. ಮೋರಿಯಲ್ಲಿ ನಾಯಿಗಳು ಮೃತದೇಹವನ್ನು ಎಳೆದಾಡುತ್ತಿದ್ದದ್ದು ಕಂಡಂತ ಡಿಲಿವರಿ ಬಾಯ್ ಒಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ವಿಷಯ ತಿಳಿದ ಬಳಿಕ ಕಾಮಾಕ್ಷಿ ಠಾಣೆಯ ಪೊಲೀಸರು ಮೋರಿ ಬಳಿಗೆ ತೆರಳಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು.
ಆರಂಭದಲ್ಲಿ ಆತ್ಮಹತ್ಯೆ ಎಂಬುದಾಗಿಯೇ ಭಾವಿಸಿದ್ದಂತ ಪೊಲೀಸರಿಗೆ ಮರಣೋತ್ತರ ಪರೀಕ್ಷೆಯಲ್ಲಿ ಹಲ್ಲೆ ಮಾಡಿ ಹತ್ಯೆ ಮಾಡಿರೋದು ತಿಳಿದು ಬಂದಿದೆ.
ತನಿಖೆ ಚುರುಕುಗೊಳಿಸಿದಾಗ ಆತ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿ ಎಂಬುದಾಗಿ ಪತ್ತೆಯಾಗಿದೆ. ಜೊತೆಗೆ ಹತ್ಯೆ ಹಿಂದೆ ನಟ ದರ್ಶನ್ ಸೇರಿದಂತೆ 13 ಆರೋಪಿಗಳ ಕೈವಾಡ ಪತ್ತೆಯಾಗಿದೆ.
ದರ್ಶನ್ ಆಪ್ತರಾದ ವಿನಯ್, ಆನಂದ್ , ಕಿರಣ್ ಅವರುಗಳನ್ನು ಬಂಧಿಸಿ, ವಿಚಾರಣೆ ನಡೆಸಿದಾಗ, ನಟ ದರ್ಶನ್ ಹೇಳಿದ್ದರಿಂದ ರೇಣುಕಾಸ್ವಾಮಿ ಹತ್ಯೆ ಮಾಡಿರೋದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.
ಈ ಬಳಿಕ ನಟ ದರ್ಶನ್, ಆತನ ಗೆಳತಿ ಪವಿತ್ರಾ ಗೌಡ, ವಿ.ವಿನಯ್, ಆರ್.ನಾಗರಾಜು, ಎಂ ಲಕ್ಷ್ಮಣ್, ಎಸ್ ಪ್ರದೋಶ್, ಕೆ.ಪವನ್, ದೀಪಕ್ ಕುಮಾರ್, ನಂದೀಶ್, ಕಾರ್ತಿಕ್, ನಿಖಿಲ್ ನಾಯಕ್, ಕೇಶವ ಮೂರ್ತಿ ಹಾಗೂ ರಾಘವೇಂದ್ರ ಆಲಿಯಾಸ್ ರಾಘು ಸೇರಿದಂತೆ 13 ಆರೋಪಿಗಳನ್ನು ಕಾಮಾಕ್ಷಿ ಠಾಣೆಯ ಪೊಲೀಸರು ಬಂಧಿಸಿದ್ದರು.
ಬಂಧಿತ ಆರೋಪಿಗಳನ್ನು ವೈದ್ಯಕೀಯ ತಪಾಸಣೆಯ ಬಳಿಕ ಬೆಂಗಳೂರಿನ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಮೂರ್ತಿಗಳು ನಿಮ್ಮನ್ನು ಎಷ್ಟು ಗಂಟೆಗೆ ಎಲ್ಲಿ ಬಂದಿಸಿದ್ದಾರೆ ಎಂದು ಪ್ರಶ್ನಿಸಿದರು. ಆಗ ಎ1 ಆರೋಪಿಯಾಗಿರುವಂತ ಪವಿತ್ರಾ ಗೌಡ ಅವರು, ಪೊಲೀಸ್ ಠಾಣೆಯಲ್ಲಿ ಮಧ್ಯಾಹ್ನ 3 ಗಂಟೆಗೆ ಬಂಧಿಸಿದ್ದಾರೆ ಎಂಬುದಾಗಿ ಪ್ರತಿಕ್ರಿಯಿಸಿದರು.
ಅಲ್ಲದೇ ನಟ ದರ್ಶನ್ ಅವರನ್ನು ಕೇಳಿದಾಗ ಅವರು 2.30ಕ್ಕೆ ಪೊಲೀಸ್ ಠಾಣೆಯಲ್ಲಿ ಇದ್ದಾಗ ಬಂದಿಸಿದ್ದಾರೆ ಎಂದು ಉತ್ತರಿಸಿದರು. ಅಲ್ಲದೇ ಪೊಲೀಸರು ಯಾವುದೇ ಕಿರುಕುಳ ನೀಡಿಲ್ಲ ಎಂಬುದಾಗಿ ಉತ್ತರಿಸಿದರು.
ಈ ವೇಳೆಯಲ್ಲಿ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ಆರೋಪಿಗಳನ್ನು 14 ದಿನಗಳ ಕಾಲ ನೀಡುವಂತೆ ನ್ಯಾಯಪೀಠಕ್ಕೆ ಮನವಿ ಮಾಡಿದರು. ಕಿಡ್ನ್ಯಾಪ್ ಮಾಡಿ ಕರೆದೊಯ್ದಿದ್ದಾರೆ. ಎಲ್ಲಾ ಕಡೆ ಮಹಜರು ಮಾಡಬೇಕು.
ಕೂಡಿ ಹಾಕಿದ ಜಾಗ, ಕೊಲೆ ಮಾಡಿದ ಸ್ಥಳ ಮಹಜರು ನಡೆಸಬೇಕು. ಕೊಲೆಯಾದ ಸ್ಥಳ, ಶವ ಎಸೆದ ಜಾಗ ಎಲ್ಲಾ ಮಹಜರು ಮಾಡಬೇಕು. ನಮ್ಮ ವಶಕ್ಕೆ 14 ದಿನ ನೀಡುವಂತೆ ಮ್ಯಾಜಿಸ್ಟ್ರೇಟ್ ಕೋರ್ಟ್ ನ ನ್ಯಾಯಮೂರ್ತಿಯನ್ನು ಕೋರಿದರು.
ಈ ಹಿನ್ನಲೆಯಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 13 ಆರೋಪಿಗಳಿಗೆ 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.