ಕೇರಳ: ವಯನಾಡ್ ಜಿಲ್ಲಾಡಳಿತವು ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪ್ರದೇಶದಲ್ಲಿ ವಿನಾಶಕಾರಿ ಭೂಕುಸಿತ ಸಂಭವಿಸಿದ ನಂತರ 130 ಜನರು ಇನ್ನೂ ಕಾಣೆಯಾಗಿದ್ದಾರೆ.
ವಿಶೇಷವಾಗಿ ಚೂರಲ್ಮಾಲಾ, ಮುಂಡಕ್ಕೈ ಮತ್ತು ಪುಂಚಿರಿವಟ್ಟಂ ಹಳ್ಳಿಗಳ ಮೇಲೆ ಪರಿಣಾಮ ಬೀರಿದೆ. ಕಾಣೆಯಾದವರಲ್ಲಿ 24 ಮಕ್ಕಳು, 57 ಮಹಿಳೆಯರು ಮತ್ತು 49 ಪುರುಷರು ಸೇರಿದ್ದಾರೆ. ಸಮಾನಾಂತರ ಜಲಾಶಯ ನಿರ್ಮಾಣದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.
ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿದ್ದರಿಂದ ಈವರೆಗೆ 8 ಟಿಎಂಸಿ ನೀರು ಪೋಲಾಗಿದೆ. ಇದೇ ಡ್ಯಾಂ ನೀರು ಕರ್ನಾಟಕ, ತೆಲಂಗಾಣ, ಆಂಧ್ರದ ರೈತರ ಜೀವನಧಾರೆಯಾಗಿದೆ ಎಂದರು.
ನಿನ್ನೆ ರಾತ್ರಿಯಿಂದ 10 ಕ್ರಸ್ಟ್ ಗೇಟ್ ಗಳ ಮೂಲಕ ನೀರು ಹೊರಗಡೆ ಬಿಡಲಾಗುತ್ತಿದೆ. 19ನೇ ಗೇಟ್ ಚೈನ್ ತುಂಡಾಗಿ ಮುರಿದಿದೆ. ಇದರ ಮೇಲೆ ಹೆಚ್ಚು ಒತ್ತಡ ಬೀಳಬಾರದು ಎನ್ನುವ ಕಾರಣಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಸುರಕ್ಷತೆಯ ದೃಷ್ಟಿಯಿಂದ ನದಿಗೆ 98 ಸಾವಿರ ಕ್ಯೂಸೆಕ್ಸ್ ನೀರು ಬಿಡಲಾಗುತ್ತಿದೆ. ಪ್ರಸ್ತುತ 28,056 ಕ್ಯೂಸೆಕ್ಸ್ ಒಳಹರಿವಿದೆ. ಮುರಿದು ಬಿದ್ದಿರುವ ಗೇಡ್ ದುರಸ್ತಿ ಮಾಡಲು ನೀರಿನ ಪ್ರಮಾಣ ಇಳಿಕೆ ಮಾಡಲಾಗುತ್ತಿದೆ. 19ನೇ ಗೇಟ್ ಮೇಲೆ ಒತ್ತಡ ಕಡಿಮೆ ಮಾಡಲು ನೀರು ರಿಲೀಸ್ ಮಾಡಲಾಗಿದೆ. ಉಳಿದ ಗೇಟ್ ಗಳ ಮೂಲಕ ಹೆಚ್ಚುವರಿ ನೀರು ನದಿಗೆ ಬಿಡಲಾಗುತ್ತಿದೆ. ನದಿ ಪಾತ್ರದ ಜನರು ಸುರಕ್ಷಿತವಾಗಿರುವಂತೆ ಸೂಚಿಸಿದರು.