ಬೆಂಗಳೂರು: ರಾಜ್ಯದ ಮೊದಲ ಹಂತದ ಲೋಕಸಭಾ ಚುನಾವಣೆಗೆ ಏಪ್ರಿಲ್.26ರಂದು ಮತದಾನ ನಡೆಯಲಿದೆ. ಈ ಹಿನ್ನಲೆಯಲ್ಲಿ ಇದೀಗ ರಾಜ್ಯದ 14 ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದೆ. ಇನ್ಮುಂದೆ ಮನೆ ಮನೆಗೆ ತೆರಳಿ ಮತಯಾಚನೆಗೆ ಮಾತ್ರವೇ ಅವಕಾಶ ನೀಡಲಾಗಿದೆ.
ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಚುನಾವಣೆಯ ಮೊದಲ ಹಂತದ ಮತದಾನ ನಡೆಯಲಿದೆ. ಈ ಕ್ಷೇತ್ರಗಳಲ್ಲಿ ಬಹಿರಂಗ ಚುನಾವಣಾ ಪ್ರಚಾರಕ್ಕೆ ತೆರೆ ಬಿದ್ದಿದೆ.
ಇನ್ಮುಂದೆ ಮನೆ ಮನೆಗೆ ತೆರಳಿ ಅಭ್ಯರ್ಥಿಗಳು ಮತಯಾಚನೆಯಲ್ಲಿ ತೊಡಗಬೇಕಿದೆ. ಅಲ್ಲದೇ ಮತದಾರರಲ್ಲದ ಕ್ಷೇತ್ರಗಳಲ್ಲಿ ಇರುವಂತ ರಾಜಯಕೀಯ ನಾಯಕರು ಕ್ಷೇತ್ರ ವ್ಯಾಪ್ತಿಯನ್ನು ಬಿಟ್ಟು ತೆರಳಬೇಕಿದೆ.
ಬೆಂಗಳೂರು ಗ್ರಾಮಾಂತರ, ಉತ್ತರ, ಕೇಂದ್ರ, ದಕ್ಷಿಣ ಲೋಕಸಭಾ ಕ್ಷೇತ್ರಗಳು, ಹಾಸನ, ಚಿಕ್ಕಬಳ್ಳಾಪುರ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ತುಮಕೂರು, ಚಿತ್ರದುರ್ಗ, ಮಂಡ್ಯ, ಮೈಸೂರು-ಕೊಡಗು, ಚಾಮರಾಜನಗರ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಏಪ್ರಿಲ್.26ರಂದು ಮತದಾನ ನಡೆಯಲಿದೆ.
ಈ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈಗಾಗಲೇ ಆಯಾ ಚಿಲ್ಲಾಧಿಕಾರಿಗಳು 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಇಂದು ಸಂಜೆ.6 ಗಂಟೆಯಿಂದ ಏಪ್ರಿಲ್.26ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟಕ್ಕೂ ನಿಷೇಧ ಹೇರಲಾಗಿದೆ.