ಬೆಂಗಳೂರು : ಬೆಂಗಳೂರಿನಲ್ಲಿ ಪಟಾಕಿ ಸಿಡಿದು ಐವರು ಮಕ್ಕಳು ಸೇರಿದಂತೆ 14 ಜನರಿಗೆ ಗಂಭೀರ ಗಾಯಗಳಾಗಿದೆ. ಇದರಲ್ಲಿ ಪಟಾಕಿ ಸಿಡಿಸುವವರಿಗಿಂತ ನೋಡುತ್ತಾ ನಿಂತವರು ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮನೆಯೊಂದರಲ್ಲಿ ಪಟಾಕಿ ಹಚ್ಚುವಾಗ ಕಣ್ಣಿಗೆ ಕಿಡಿಗಳು ಸಿಡಿದು 3 ವರ್ಷದ ಬಾಲಕನ ಕಣ್ಣಿಗೆ ಸಣ್ಣ ಪ್ರಮಾಣದ ಗಾಯವಾಗಿದೆ.
ನಾರಾಯಣ ನೇತ್ರಾಲಯದಲ್ಲಿ ಬಾಲಕನಿಗೆ ಚಿಕಿತ್ಸೆ ನೀಡಲಾಗಿದೆ. ಮತ್ತೊಂದು ಪ್ರಕರಣದಲ್ಲಿ 12 ವರ್ಷದ ಬಾಲಕಿಯ ಕಣ್ಣಿಗೆ ಸಿಡಿದಿದೆ.
ಪರಿಣಾಮ ಬಾಲಕಿಯ ಕಾರ್ನಿಯಾ ಭಾಗಕ್ಕೆ ಲಘಂ ಪ್ರಮಾಣದ ಹಾನಿಯಾಗಿದೆ. ಪಟಾಕಿಯ ಕಣಗಳನ್ನು ಹೊರ ತೆಗೆಯಲಾಗಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ನಾರಾಯಣ ಆಸ್ಪತ್ರೆ ತಿಳಿಸಿದೆ.
ಪಟಾಕಿ ಸಿಡಿಸುವಾಗ ಜಾಗ್ರತೆ ವಹಿಸಬೇಕು. ಆದರಲ್ಲೂ ಮಕ್ಕಳು ಪಟಾಕಿ ಸಿಡಿಸುವಾಗ ಪಾಲಕರು ಸಮೀಪದಲ್ಲೇ ಇದ್ದು ಎಚ್ಚರಿಕೆ ವಹಿಸಬೇಕು ಎಂದು ನಾರಾಯಣ ನೇತ್ರಾಲಯದ ನಿರ್ದೇಶಕ ಡಾ. ನರೇನ್ ಶೆಟ್ಟಿ ಸಲಹೆ ನೀಡಿದ್ದಾರೆ.
ಮಿಂಟೋ ಆಸ್ಪತ್ರೆಯಲ್ಲಿ 2 ಕೇಸ್, ಹಾಗೂ ನಾರಾಯಣ ನೇತ್ರಾಲಯದಲ್ಲಿ ಮೂರು ಕೇಸ್ ದಾಖಲಾಗಿದೆ. 12 ಹಾಗೂ 14 ವರ್ಷದ ಇಬ್ಬರು ಮಕ್ಕಳಿಗೆ ಮಿಂಟೋ ಆಸ್ಪತ್ರೆ ಹಾಗೂ 15 ವರ್ಷದ ಮೂವರು ಮಕ್ಕಳಿಗೆ ನಾರಾಯಣನೇತ್ರಾಲಯದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ




