ಹಾಸನ : ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಬೆಂಗಳೂರಿನಲ್ಲಿ ವಾಸವಿದ್ದ ಪದವಿ ವಿದ್ಯಾರ್ಥಿನಿ ಸುಪ್ರಿಯಾ ಮೃತಪಟ್ಟಿದ್ದಾರೆ.
ಬೆಂಗಳೂರಿನ ವಾಸವಿದ್ದ ಹಾಸನ ಮೂಲದ ಸುಪ್ರಿಯಾ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಡಿದ್ದು, ಹಾಸನದಲ್ಲಿ ಇದುವರೆಗೆ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ.
ಸುಪ್ರಿಯಾ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಟ್ಟಳ್ಳಿ ಗ್ರಾಮದ ನಿವಾಸಿಯಾಗಿದ್ದರು. ಅವರು ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ವಾಸವಾಗಿದ್ದರು. ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಪದವಿ ಓದುತ್ತಿದ್ದರು. ನಿನ್ನೆ ಆಕೆ ಏಕಾಏಕಿ ಕುಸಿದು ಬಿದಿದ್ದು, ಆಸ್ಪತ್ರೆಗೆ ಕರೆದೊಯ್ಯವಷ್ಟರಲ್ಲಿ ಮೃತಪಟ್ಟಿದ್ದಾ ಳೆ.




