Join The Telegram | Join The WhatsApp |
ಶಿವಮೊಗ್ಗ: ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಪಲ್ಟಿಯಾಗಿ ಬಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತುಮರಿ ಬಳಿ ನಡೆದಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಧರ್ಮಪುರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಸಾಗರದ ತುಮರಿ ಬಳಿ ಶಾಲಾ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ 15 ಮಕ್ಕಳು ಗಾಯಗೊಂಡಿದ್ದು, ಅವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ. ಗಾಯಾಳು ವಿದ್ಯಾರ್ಥಿಗಳನ್ನು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Join The Telegram | Join The WhatsApp |