ರಾಯಚೂರು :- ಪೂರತಿಪ್ಲಿ ಗ್ರಾಮದಲ್ಲಿ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ರಾಯಚೂರು , ಕೃಷಿ ಮಹಾವಿದ್ಯಾಲಯ ರಾಯಚೂರಿನ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ ಆರಂಭಿಸಿದ್ದು ,ಪೂರತಿಪ್ಲಿ ಗ್ರಾಮ ಪಂಚಾಯತಿಯಲ್ಲಿ ನಡೆದ 155ನೇ ಮಹಾತ್ಮ ಗಾಂಧೀಜಿ ಜಯಂತಿಯಲ್ಲಿ ಪಾಲ್ಗೊಂಡಿದ್ದರು. ಶಿಬಿರದ ಭಾಗವಾಗಿ ಕೃಷಿ ಪದವಿ ವಿದ್ಯಾರ್ಥಿಗಳು ಜಾಥವನ್ನು ನಡೆಸಿದರು. ಹಾಗೂ ಸ್ವಚ್ಛ ಭಾರತ ಅಭಿಯಾನವನ್ನು ಕೈಗೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಸರಿತಾ , ಪಿ.ಡಿ.ಓ ರಾದ ಟಿ. ಹನುಮಂತಪ್ಪ ಮತ್ತು ಕೃಷಿ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ|| ಮನೋಜ ಕುಮಾರ. ಜಿ ಅವರ ಉಪಸ್ಥಿತಿಯಲ್ಲಿ ಗ್ರಾಮಸ್ಥರು ಹಾಗೂ ಕೃಷಿ ಪದವಿ ವಿದ್ಯಾರ್ಥಿಗಳು ಸ್ವಚ್ಛತಾ ಅಭಿಯಾನವನ್ನು ಕೈಗೊಂಡರು.
ವರದಿ:- ಗಾರಲದಿನ್ನಿ ವೀರನಗೌಡ