ಬೆಂಗಳೂರು : ಅಕ್ರಮ ಸಾಗಣೆ ವಿರುದ್ಧ ರಾಜ್ಯಾದ್ಯಂತ ಹದ್ದಿನ ಕಣ್ಣಿರಿಸಲಾಗಿದ್ದು, ಈ ಸಂಬಂಧ ಇದುವರೆಗೆ 1,707 ಪ್ರಕರಣಗಳು ದಾಖಲಾಗಿವೆ.
ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಜಾರಿಯಲ್ಲಿರುವ ಚುನಾವಣಾ ನೀತಿಯನ್ನು ಕಟ್ಟುನಿಟ್ಟಾಗಿ ನಿಭಾಯಿಸಲಾಗುತ್ತಿದ್ದು, ಕಾನೂನು ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಲಾಗುತ್ತಿದೆ.
ನಗದು, ಮದ್ಯ, ಡ್ರಗ್ಸ್, ಬೆಲೆಬಾಳುವ ವಸ್ತುಗಳು ಇತ್ಯಾದಿ ಅಕ್ರಮ ಸಾಗಣೆ ವಿರುದ್ಧ ರಾಜ್ಯಾದ್ಯಂತ ಹದ್ದಿನ ಕಣ್ಣಿರಿಸಲಾಗಿದ್ದು, ಈ ಸಂಬಂಧ ಇದುವರೆಗೆ 1,707 ಪ್ರಕರಣಗಳು ದಾಖಲಾಗಿವೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.