ನವದೆಹಲಿ: ಪಾಕಿಸ್ತಾನದ ಉಗ್ರರ ಅಡಗುತಾಣವನ್ನು ಗುರಿಯಾಗಿಸಿ ಭಾರತದ ಸೇನೆ ದಾಳಿ ಮೇ 7ರ ಮಧ್ಯರಾತ್ರಿ ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ) ಮತ್ತು ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಕ್ಷಿಪಣಿ ದಾಳಿ ನಡೆಸಿದೆ. ಇದರ ಬೆನ್ನಲ್ಲೇ ಪಾಕಿಸ್ತಾನ ಸೇನೆ ಪ್ರತೀಕಾರದ ಮಾತುಗಳೊಂದಿಗೆ ದುಸ್ಸಾಹಸಕ್ಕೆ ಮುಂದಾಗಿದೆ.
ಈ ಹಿನ್ನೆಲೆ ಸಂಭವಿತ ದಾಳಿ ಸಾಧ್ಯತೆ ಹಿನ್ನೆಲೆ ದೇಶದ 18 ವಿಮಾನಗಳ ಹಾರಾಟ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದೆ. ಸುಮಾರು 200 ವಿಮಾನಗಳನ್ನು ರದ್ದು ಮಾಡಲಾಗಿದ್ದು, ಶ್ರೀನಗರ ಸೇರಿದಂತೆ 18 ವಿಮಾನ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.
ಏರ್ ಇಂಡಿಯಾ, ಇಂಡಿಗೋ, ಸ್ಪೈಸ್‌ಜೆಟ್, ಏರ್ ಇಂಡಿಯಾ ಎಕ್ಸ್‌ಪ್ರೆಸ್, ಆಕಾಶ ಏರ್ ಮತ್ತು ಕೆಲವು ವಿದೇಶಿ ವಿಮಾನಯಾನ ಸಂಸ್ಥೆಗಳು ವಿವಿಧ ವಿಮಾನ ನಿಲ್ದಾಣಗಳಲ್ಲಿ ಸೇವೆಗಳನ್ನು ರದ್ದುಗೊಳಿಸಿವೆ.
ಮೂಲಗಳ ಪ್ರಕಾರ, ಭಾರತದ ಉತ್ತರ ಮತ್ತು ಪಶ್ಚಿಮ ಭಾಗಗಳಲ್ಲಿ ಕನಿಷ್ಠ 18 ವಿಮಾನ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಶ್ರೀನಗರ, ಲೇಹ್, ಜಮ್ಮು, ಅಮೃತಸರ್, ಪಠಾಣ್‌ಕೋಟ್, ಚಂಡೀಗಢ, ಜೋಧ್‌ಪುರ, ಜೈಸಲ್ಮೇರ್, ಶಿಮ್ಲಾ, ಧರ್ಮಶಾಲಾ ಮತ್ತು ಜಾಮ್‌ನಗರ ವಿಮಾನ ನಿಲ್ದಾಣಗಳನ್ನು ಮುಚ್ಚಲಾಗಿದೆ. ಮೂಲಗಳ ಪ್ರಕಾರ, ಈ ವಿಮಾನ ನಿಲ್ದಾಣಗಳಿಂದ ಸುಮಾರು 200 ವಿಮಾನಗಳ ಸೇವೆ ರದ್ದಾಗಿದೆ.




