Ad imageAd image

ಸದನದ ಪೀಠಕ್ಕೆ ಅಗೌರವ: 18 ಬಿಜೆಪಿ ಶಾಸಕರು 6 ತಿಂಗಳು ಅಮಾನತು

Bharath Vaibhav
ಸದನದ ಪೀಠಕ್ಕೆ ಅಗೌರವ: 18 ಬಿಜೆಪಿ ಶಾಸಕರು 6 ತಿಂಗಳು ಅಮಾನತು
WhatsApp Group Join Now
Telegram Group Join Now

ಬೆಂಗಳೂರುಸದನದ ಪೀಠಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ 18 ಬಿಜೆಪಿ ಶಾಸಕರನ್ನು ಕಲಾಪದಿಂದ 6 ತಿಂಗಳು ಅಮಾನತುಗೊಳಿಸಿ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ.

ಹನಿಟ್ರ್ಯಾಪ್ ಪ್ರಕರಣ ಖಂಡಿಸಿ, ಪ್ರಕರಣದ ಸಿಬಿಐ ತನಿಖೆ ಆಗ್ರಹಿಸಿ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದರು. ಆಡಳಿತ ಪಕ್ಷದ ವಿರುದ್ಧ ಬಿಜೆಪಿ ಸದಸ್ಯರು ಘೋಷಣೆ ಕೂಗಿದರು. ಸ್ಪೀಕರ್ ಪೀಠದ ಮೇಲೆ ಏರಿ ಬಂದ ಬಿಜೆಪಿ ಸದಸ್ಯರು ತಮ್ಮ ಆಕ್ರೋಶ ಹೊರಹಾಕಿದ್ದರು. ಗದ್ದಲ ಕೋಲಾಹಲದ ನಡುವೆ ಸ್ಪೀಕರ್ ಪೀಠದ ಮೇಲೆ ಬಿಜೆಪಿ ಸದಸ್ಯರು ಕಾಗದ ಪ್ರತಿಗಳನ್ನು ಹರಿದು ಎಸೆದಿದ್ದರು. ಈ ಹಿನ್ನೆಲೆ ಪೀಠಕ್ಕೆ ಅಗೌರವ ತೋರಿದ 18 ಮಂದಿ ಬಿಜೆಪಿ ಸದಸ್ಯರನ್ನು ಸದನ ಕಲಾಪದಿಂದ 6 ತಿಂಗಳಿಗೆ ಅಮಾನತುಗೊಳಿಸಿ ಸ್ಪೀಕರ್ ರೂಲಿಂಗ್ ನೀಡಿದರು.

ಯಾರ್ಯಾರು ಅಮಾನತುಬಿಜೆಪಿ ಶಾಸಕರಾದ ದೊಡ್ಡಣ್ಣ ಗೌಡ ಪಾಟೀಲ್, ಎಸ್.ಆರ್ ವಿಶ್ವನಾಥ್, ಅಶ್ವತ್ಥ್ ನಾರಾಯಣ್, ಚೆನ್ನಬಸಪ್ಪ, ಉಮನಾಥ್ ಕೋಟ್ಯಾನ್, ಯಶಪಾಲ್ ಸುವರ್ಣ, ಹರೀಶ್ ಬಿ.ಪಿ., ಚಂದ್ರು ಲಮಾಣಿ, ಶರಣು ಸಲಗಾರ್, ಶೈಲೇಂದ್ರ ಬೆಳ್ದಾಳೆ, ಸಿ.ಕೆ.ರಾಮಮೂರ್ತಿ, ಮುನಿರತ್ನ, ಧೀರಜ್ ಮುನಿರಾಜ್, ಭರತ್ ಶೆಟ್ಟಿ, ಬಸವರಾಜ್ ಮತ್ತಿಮೂಡ್, ಸುರೇಶ್ ಗೌಡ, ಬಿ.ಬಸವರಾಜ್, ಎಂ.ಆರ್.ಪಾಟೀಲ್ ಅವರನ್ನು ಆರು ತಿಂಗಳಿಗೆ ವಿಧಾನಸಭೆ ಕಲಾಪದಿಂದ ಅಮಾನತುಗೊಳಿಸಿ ಆದೇಶ ನೀಡಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!