ಬೆಳಗಾವಿ: 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 2-12-2024 ರಂದು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಮಿತಿ ಸಭೆಯ ಮುಖ್ಯಾಂಶಗಳು:
• ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಅಂಗವಾಗಿ ಡಿಸೆಂಬರ್ 26 ಮತ್ತು 27ರಂದು ಕಾರ್ಯಕ್ರಮಗಳಿಗೆ ಚಾಲನೆ.
• ಶತಮಾನೋತ್ಸವ ಅಂಗವಾಗಿ ವರ್ಷವಿಡೀ ʻಗಾಂಧೀ ಭಾರತʼ ಹೆಸರಿನಲ್ಲಿ ಅರ್ಥಪೂರ್ಣ ಕಾರ್ಯಕ್ರಮಗಳ ಆಯೋಜನೆಗೆ ಸಿದ್ಧತೆಗಳನ್ನು ಆರಂಭಿಸುವಂತೆ ಮುಖ್ಯಮಂತ್ರಿ ಅವರಿಂದ ಸೂಚನೆ.
• ಬೆಳಗಾವಿಯಲ್ಲಿ ಡಿ.26ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಮತ್ತು ಡಿ.27ರಂದು ಸಾರ್ವಜನಿಕ ಸಭೆ ನಡೆಸಲು ನಿರ್ಧಾರ.
• ಮೈಸೂರು ದಸರಾ ಮಾದರಿಯಲ್ಲಿ ಬೆಳಗಾವಿ ನಗರದ ಪ್ರಮುಖ 32 ಕಿಮೀ ಉದ್ದದ ರಸ್ತೆ ಹಾಗೂ 30 ವೃತ್ತಗಳ ದೀಪಾಲಂಕಾರ.
• ಕಾಂಗ್ರೆಸ್ ಅಧಿವೇಶನ ನಡೆದ ಸ್ಥಳದಲ್ಲಿ ವೀರಸೌಧ ಅಭಿವೃದ್ಧಿ. ಈ ಸ್ಥಳದಲ್ಲಿ ಗ್ರಂಥಾಲಯ ಮತ್ತು ಗಾಂಧಿ ಪ್ರತಿಮೆ ಅನಾವರಣ.
• ಬೆಳಗಾವಿಯ 2.1 ಕಿ.ಮೀ ಉದ್ದದ ಕಾಂಗ್ರೆಸ್ ರಸ್ತೆಯಲ್ಲಿ ಶತಮಾನೋತ್ಸವದ ಸ್ಮಾರಕವಾಗಿ ತಾತ್ಕಾಲಿಕ ವಿರೂಪಾಕ್ಷ ಗೋಪುರ ನಿರ್ಮಾಣ, ರೈಲು ಮಾರ್ಗದ ತಡೆಗೋಡೆಯುದ್ದಕ್ಕೂ ಉಬ್ಬು ಶಿಲ್ಪಗಳ ನಿರ್ಮಾಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ನಿರ್ಧಾರ.
• ಕಣಬರಗಿಯಲ್ಲಿ ಗಂಗಾಧರ ರಾವ್ ದೇಶಪಾಂಡೆಯವರ ಸ್ಮಾರಕದಲ್ಲಿ ಮೂರ್ತಿ ಸ್ಥಾಪನೆ, ಮ್ಯೂಸಿಯಂ ಉದ್ಘಾಟನೆ. ಹುದಲಿಯಲ್ಲಿ ಗಾಂಧೀ ಸ್ಮಾರಕ ಹಾಗೂ ಛಾಯಾಚಿತ್ರ ಗ್ಯಾಲರಿಯ ಅಭಿವೃದ್ಧಿ.
• ಗಾಂಧೀಜಿ ಅವರು ವಿವಿಧ ಕಾಲಘಟ್ಟಗಳಲ್ಲಿ ಭೇಟಿ ನೀಡಿದ ರಾಜ್ಯದ 120 ಸ್ಥಳಗಳಲ್ಲಿ ನೆನಪಿನ ಸ್ತಂಭಗಳನ್ನು ನಿರ್ಮಿಸಲು ತೀರ್ಮಾನ.
• ಅಟನ್ ಬರೋ ನಿರ್ಮಿಸಿದ ಪ್ರಸಿದ್ಧ ʻಗಾಂಧಿʼ ಸಿನೆಮಾವನ್ನು ಕನ್ನಡದಲ್ಲಿ ನಿರ್ಮಿಸಲು ನಿರ್ಧಾರ.
• ಸುವರ್ಣ ವಿಧಾನಸೌಧದಲ್ಲಿ ಕಾಂಗ್ರೆಸ್ ಅಧಿವೇಶನ, ಸ್ವಾತಂತ್ರ್ಯ ಚಳವಳಿಯನ್ನು ಪ್ರತಿಬಿಂಬಿಸುವ ಛಾಯಾಚಿತ್ರ ಗ್ಯಾಲರಿ ನಿರ್ಮಾಣ.
• ಡಿ.26 ರಂದು ಗಣ್ಯ ಪ್ರತಿನಿಧಿಗಳಿಗಾಗಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಡಿ.27 ರಂದು ಸಾರ್ವಜನಿಕರಿಗೆ ಸಾಂಸ್ಕೃತಿಕ ಕಾರ್ಯಕ್ರಮ.
• ಶತಮಾನೋತ್ಸವದ ನೆನಪಿಗೆ ವಿಶೇಷ ಅಂಚೆ ಚೀಟಿ ಬಿಡುಗಡೆಗೆ ನಿರ್ಧಾರ.