Ad imageAd image

ನಿಪ್ಪಾಣಿಯಲ್ಲಿ ಸರಣಿ ಅಪಘಾತ : ಇಬ್ಬರು ಸಾವು, ಆರು ಮಂದಿಗೆ ಗಾಯ 

Bharath Vaibhav
ನಿಪ್ಪಾಣಿಯಲ್ಲಿ ಸರಣಿ ಅಪಘಾತ : ಇಬ್ಬರು ಸಾವು, ಆರು ಮಂದಿಗೆ ಗಾಯ 
ACCIDENT
WhatsApp Group Join Now
Telegram Group Join Now

ಬೆಳಗಾವಿ : ಸರಣಿ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು ಆರು ಜನರಿಗೆ ಗಂಭೀರವಾದಂತಹ ಗಾಯಗಳಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಸ್ಥವನಿಧಿ ಘಾಟ್ ನಲ್ಲಿ ಈ ಒಂದು ಭೀಕರ ಸರಣಿ ಅಪಘಾತ ನಡೆದಿದೆ.

ಸ್ಥವನಿಧಿ ಘಾಟ್ ನಲ್ಲಿ ಸರಣಿ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಘಾಟ್ ಬಳಿ 8 ವಾಹನಗಳ ನಡುವೆ ಸರಣಿ ಅಪಘಾತವಾಗಿದೆ.

ಅಪಘಾತದಲ್ಲಿ ಇಬ್ಬರು ದುರ್ಮರಣ ಹೊಂದಿದ್ದು ಆರು ಜನರಿಗೆ ಗಾಯಗಳಾಗಿವೆ. ಗಾಯಗೊಂಡಿರುವ 6 ಜನರಿಗೆ ನಿಪ್ಪಾಣಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಂಟೇನರ್ ಚಾಲಕನ ನಿರ್ಲಕ್ಷ್ಯದಿಂದ ಈ ಒಂದು ಅಪಘಾತ ಸಂಭವಿಸಿದೆ. 3 ಕಾರು, 2 ಲಾರಿ, 1 ಕಂಟೇನರ್ ಹಾಗೂ ಬೈಕ್ ಗೆ, ಕಂಟೇನರ್ ಡಿಕ್ಕಿ ಹೊಡೆದಿದೆ. ಓರ್ವ ಬೈಕ್ ಸವಾರ ಹಾಗೂ ಕಾರಿನಲ್ಲಿದ್ದ ಓರ್ವ ಪ್ರಯಾಣಿಕ ಈ ಅಪಘಾತದಲ್ಲಿ ಸಾವನ್ನಪ್ಪಿದ್ದು, ನಿಪ್ಪಾಣಿ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!