ಬೆಂಗಳೂರು: ರಾಜ್ಯದ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಘೋಷಣೆ ಮಾಡಿದ್ದಂತೆ ಗೃಹಲಕ್ಷ್ಮಿಯೋಜನೆಯನ್ನು ಅನುಷ್ಠಾನಕ್ಕೆ ತಂದಿದ್ದು ಪ್ರತಿ ತಿಂಗಳು ಮಹಿಳೆಯರಿಗೆ 2000/- ರೂಪಾಯಿ ಹಣನೀಡಲಾಗುತ್ತಿದೆ.
ಈ ಮಧ್ಯೆ ಕಾಂಗ್ರೆಸ್ ಶಾಸಕ ಕುಣಿಗಲ್ ರಂಗನಾಥ್ ಸದನದಲ್ಲೇ ಅಚ್ಚರಿಯ ಘೋಷಣೆಯೊಂದನ್ನು ಮಾಡಿದ್ದು,2028ರಲ್ಲಿ ಮತ್ತೆ ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ ನೀಡಲಾಗುತ್ತಿರುವ 2000 ಹಣವನ್ನು 4000ಕ್ಕೆ ಏರಿಕೆ ಮಾಡಲಾಗುವುದು ಎಂದು ಮಹತ್ವದ ಘೋಷಣೆ ಮಾಡಿದ್ದಾರೆ.
ರಾಜ್ಯದಲ್ಲಿ ಗೃಹ ಲಕ್ಷ್ಮೀ ಯೋಜನೆಯಿಂದ ಲಕ್ಷಾಂತರ ಮಹಿಳೆಯರು ನೆಮ್ಮದಿಯ ಜೀವನ ಸಾಗಿಸುತ್ತಿದ್ದಾರೆ.ಈ ರೀತಿ ಹಣ ನೀಡಿದ್ರೆ ಸರ್ಕಾರ ದಿವಾಳಿಯಾಗಲಿದೆ ಎಂದವರು ಈಗ ಸೈಲೆಂಟ್ ಆಗಿದ್ದಾರೆ ಎಂದ ಅವರು,ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಬಂದ್ರೆ ಗೃಹ ಲಕ್ಷ್ಮೀ ಹಣವನ್ನು 4000ಕ್ಕೆ ಏರಿಕೆ ಮಾಡಲು ನಾವು ತಯಾರಿದ್ದೇವೆ ಎಂದಿದ್ದಾರೆ.