
ಯಶವಂತಪುರ: ಕ್ಷೇತ್ರದ ಚನ್ನೇನಹಳ್ಳಿ ಗ್ರಾಮ ಪಂಚಾಯಿತಿ 2025- 26 ನೇ ಸಾಲಿನ ಪ್ರಥಮ ಗ್ರಾಮ ಸಭೆಯು ಎಲಚಕುಪ್ಪೆ ಅಶ್ವತ ಕಟ್ಟೆ ಆವರಣದಲ್ಲಿ ಆಯೋಜಿಸಿದ್ದ ಸಭೆಗೆ ಜ್ಯೋತಿ ಬೆಳಗುವ ಮೂಲಕ ಅಧ್ಯಕ್ಷರು ಸಭೆಗೆ ಚಾಲನೆ ನೀಡಿದರು.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪ್ರಾಸ್ತಾವಿಕ ಭಾಷಣ ಮಾಡಿ ಆಡಳಿತ ವರದಿ ಮಂಡನೆ ಮಾಡಿದರು. ನಂತರ ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ಚರ್ಚೆ ನಡೆಸಿ ವಿವಿಧ ಇಲಾಖಾಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಪಟ್ಟ ಸೌಕರ್ಯಗಳ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಶ್ರೀಮತಿ ರಾಜೇಶ್ವರಿ ರಂಗನುಮಯ್ಯ, ಉಪಾಧ್ಯಕ್ಷ ಕುಮಾರಸ್ವಾಮಿ ಹೆಚ್‌ಜಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾರಾಯಣಸ್ವಾಮಿ ಬಿ ಆರ್, ಕಾರ್ಯದರ್ಶಿ ಹರೀಶ್ ಬಿ ಡಿ, ಪಂಚಾಯತಿ ಸದಸ್ಯರು ಸುತ್ತಮುತ್ತಲಿನ ಗ್ರಾಮದ ಸಮಸ್ತ ನಾಗರಿಕರು ಮಹಿಳೆಯರು ಮುಂತಾದವರು ಇದ್ದರು.
ವರದಿ: ಬಾಲಾಜಿ ವಿ




