ಯಳಂದೂರು : ಪಟ್ಟಣದ ಎಸ್ ಡಿ. ವಿ ಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 24ನೇ ವರ್ಷದ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು,
ಕಾರ್ಯಕ್ರಮದ ಉದ್ಘಾಟನೆಯನ್ನು ಜ್ಯೋತಿ ಬೆಳಗಿಸುವ ಮೂಲಕ ಸುಂದ್ರಮ್ಮ ರವರ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡುವ ಮೂಲಕ ಕರ್ನಾಟಕ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ರಾಜ್ಯ ಅಧ್ಯಕ್ಷರಾದ ಕುರುಬರು ಶಾಂತಕುಮಾರ್ ರವರು ನೆರೆವೇರಿಸಿದರು .ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ವಿ ಎಸ್ ವಿದ್ಯಾ ಸಂಸ್ಥೆಯ ಸಂಸ್ಥಾಪಕರಾದ ದುಗ್ಗಹಟ್ಟಿ ವಿರಭದ್ರಪ್ಪನವರು ವಹಿಸಿದರು.

ಶಾಲೆಯ ಮುಖ್ಯ ಶಿಕ್ಷಕರಾದ ವೀರಭದ್ರಸ್ವಾಮಿ ರವರು ಶಾಲೆಯ ವಾರ್ಷಿಕ ವರದಿಯನ್ನು ಮಂಡಿಸಿದರು .ಈ ಸಂದರ್ಭದಲ್ಲಿ ಈ ವರ್ಷದ ಶಾಲೆಯ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಶಾಲೆಯ ಸಂಸ್ಥಾಪಕರು ಪ್ರಶಸ್ತಿ ನೀಡಿದರು ,ನಂತರ ಶಾಲೆಯ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೆಡೆಸಲಾಯಿತು .ಈ ಸಂದರ್ಭದಲ್ಲಿ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಹಾಗೂ ಪೋಷಕರು, ಮಕ್ಕಳು ಹಾಜರಿದ್ದರು
ವರದಿ :ಸ್ವಾಮಿ ಬಳೇಪೇಟೆ




