ತಿರುಪತಿಯಲ್ಲಿ ನಡೆದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 25 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ಆಂದ್ರಪ್ರದೇಶ ಸರ್ಕಾರ ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ ಮಾಡಿದೆ.
ಆಂಧ್ರಪ್ರದೇಶದ ತಿರುಪತಿಯಲ್ಲಿರುವ ವೈಕುಂಠ ದ್ವಾರ ದರ್ಶನ ಟಿಕೆಟ್ ಖರೀದಿಸುವ ಕೇಂದ್ರಗಳ ಬಳಿ ಕಾಲ್ತುಳಿತ ಸಂಭವಿಸಿ ಆರು ಜನರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ.
4,000 ಕ್ಕೂ ಹೆಚ್ಚು ಭಕ್ತರು ಮತ್ತು 10 ದಿನಗಳ ವಿಶೇಷ ದರ್ಶನಕ್ಕಾಗಿ ಟೋಕನ್ ಪಡೆಯಲು ಭಾರಿ ಜನಸಂದಣಿ ಇದ್ದಾಗ ಈ ಕಾಲ್ತುಳಿತ ಸಂಭವಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಘಟನೆಯಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ತಿರುಪತಿ ಕಾಲ್ತುಳಿತ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಮೋದಿ ಅವರು ದುಃಖ ವ್ಯಕ್ತಪಡಿಸಿದ್ದಾರೆ ಮತ್ತು ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.