ಬೆಂಗಳೂರು : ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತವು ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ವೈಮಾನಿಕ ದಾಳಿ ಮಾಡಿ ಅನೇಕ ನೆಲೆಗಳನ್ನು ಧ್ವಂಸ ಮಾಡಿ ತಕ್ಕ ಪಾಠ ಕಲಿಸಿದ ಭಾರತೀಯ ಸೇನೆಗೆ ಮಂತ್ರಾಲಯದಿಂದ ಪ್ರಸಾದ ರೂಪದಲ್ಲಿ 25 ಲಕ್ಷ ರೂ.ನೀಡುವುದಾಗಿ ಘೋಷಿಸಿದ್ದಾರೆ.
ಮಂತ್ರಾಲಯ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ತಮ್ಮ 13 ನೇ ಪಟ್ಟಾಭಿಷೇಕ ಮಹೋತ್ಸವದ ವೇಳೆ ಭಾರತ ರಕ್ಷಣಾ ಸಚಿವಾಲಯಕ್ಕೆ ಪ್ರಸಾದ ರೂಪದಲ್ಲಿ 25 ಲಕ್ಷ ರೂ. ದೇಣಿಗೆ ನೀಡುವುದಾಗಿ ಘೋಷಣೆ ಮಾಡಿದರು.
ಬಳಿಕ ಮಾತನಾಡಿದ ಶ್ರೀ ಸುಬುಧೇಂದ್ರ ತೀರ್ಥರು, ಪಹಲ್ಗಾಮ್ ದಾಳಿಯಲ್ಲಿ ಮಡಿದವರಿಗೆ ಹಾಗೂ ಆಪರೇಷನ್ ಸಿಂದೂರ್ ಕಾರ್ಯಾಚರಣೆ ವೇಳೆ ಹುತಾತ್ಮರಾದ ಯೋಧರಿಗೆ ಸದ್ಗತಿ ದೊರೆಯಲಿ ಎಂದು ಪ್ರಾರ್ಥಿಸಿದರು
ಅಲ್ಲದೇ ಪಹಲ್ಗಾಮ್ ದಾಳಿಗೆ ಪ್ರತೀಕಾರ ತಿರಿಸಿಕೊಳ್ಳುವಲ್ಲಿ ಸಹಕರಿಸಿದ ಭಾರತೀಯ ಸೇನೆ, ಸಚಿವಾಲಯ, ಪ್ರಧಾನಿ ಮೋದಿಯವರ ಕಾರ್ಯ ವೈಖರಿ, ದೃಢ ನಿರ್ಧಾರ, ಧೈರ್ಯಕ್ಕೆ ಶ್ರೀ ಸುಬುಧೇಂದ್ರ ತೀರ್ಥರು ಶ್ಲಾಘನೆ ವ್ಯಪಡಿಸಿದರು.




