Ad imageAd image

ದ್ವಿತೀಯ ಪಿಯುಸಿ ಪರೀಕ್ಷೆ ಸರ್ಕಾರಿ ಬಸ್ ಬಾರದೆ ವಿದ್ಯಾರ್ಥಿಗಳ ಆಕ್ರೋಶ

Bharath Vaibhav
ದ್ವಿತೀಯ ಪಿಯುಸಿ ಪರೀಕ್ಷೆ ಸರ್ಕಾರಿ ಬಸ್ ಬಾರದೆ ವಿದ್ಯಾರ್ಥಿಗಳ ಆಕ್ರೋಶ
WhatsApp Group Join Now
Telegram Group Join Now

ಧಾರವಾಡ : ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಸಮಯಕ್ಕೆ ಸರಿಯಾಗಿ ಬಸ್ ಬಾರದೆ ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿ ಗಂಟೆ ಗಟ್ಟಲೆ ಕಾಯುತ್ತಾ.. ಪರದಾಡುವ ಸ್ಥಿತಿ ಧಾರವಾಡ ತಾಲೂಕಿನ ಲಕಮಾಪುರ ಗ್ರಾಮದಲ್ಲಿ ನಿರ್ಮಾಣವಾಗಿದೆ.

ಸರಿಯಾಗಿ ಬಸ್ ವ್ಯವಸ್ಥೆ ಇಲ್ಲದಿರುವ ಕಾರಣ ವಿದ್ಯಾರ್ಥಿಗಳು ಶಾಲೆ-ಕಾಲೇಜಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ಬೆಳಗ್ಗೆ 10 ಗಂಟೆಯಾದರೂ ವಿದ್ಯಾರ್ಥಿಗಳು ಬಸ್ ನಿಲ್ದಾಣದಲ್ಲಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕುರಿತು ಸಂಭವಿಸಿದ ಅಧಿಕಾರಿಗಳು ಸಹ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಲಕಮಾಪೂರ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯುತ್ತಿರುವ ಈ ಸಂದರ್ಭದಲ್ಲಿ ಬಸ್ ಸರಿಯಾಗಿ ಬರುತ್ತಿಲ್ಲ, ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಿದೆ ಎಂದು ಎಂದು ವಿದ್ಯಾರ್ಥಿಗಳು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಕೆ ಎಸ್ ಆರ್ ಟಿ ಸಿ ಇಲಾಖೆಯ ಅಧಿಕಾರಿಗಳು ಕೂಡಲೇ ವಿದ್ಯಾರ್ಥಿಗಳ ಅಳಲಿಗೆ ಸ್ಪಂದಿಸಬೇಕು ಇಲ್ಲವಾದಲ್ಲಿ ವಿದ್ಯಾರ್ಥಿಗಳು ಮುಂದೆ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ವರದಿ : ವಿನಾಯಕ ಗುಡ್ಡದಕೇರಿ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!