ಅಯೋಧ್ಯೆ: ರಾಮಮಂದಿರ ನಿರ್ಮಾಣ ಕಾರ್ಯಕ್ಕೆ ಸಾರ್ವಜನಿಕರಿಂದ 3000 ಕೋಟಿ ರೂ.ಗೂ ಹೆಚ್ಚು ದೇಣಿಗೆ ಬಂದಿದೆ ಎಂದು ರಾಮಮಂದಿರ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಬುಧವಾರ ತಿಳಿಸಿದ್ದಾರೆ.
ರಾಮ ಮಂದಿರ ನಿರ್ಮಾಣ ಯೋಜನೆಯ ಒಟ್ಟು ಮೊತ್ತ 1,800 ಕೋಟಿ ರೂ.ಭಕ್ತರಿಂದ 3000 ಕೋಟಿ ರೂ. ಹಣ ಬಂದಿದೆ ಎಂದು ತಿಳಿಸಿದ್ದಾರೆ.
2022ರಲ್ಲಿ ಧನಸಹಾಯಕ್ಕೆ ಅಭಿಯಾನ ಆರಂಭವಾದಾಗಿನಿಂದ ಭಕ್ತರು ದೇಣಿಗೆ ನೀಡಿದ್ದಾರೆ. ಎಲ್ಲಾ ದಾನಿಗಳನ್ನು ನ.25ರಂದು ನಡೆಯುವ ಧ್ವಜಾರೋಹಣಕ್ಕೆ ಆಹ್ವಾನಿಸಲಾಗಿವುದು. ಪ್ರಧಾನಿ ಮೋದಿ ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿರುತ್ತಾರೆ ಎಂದು ತಿಳಿಸಿದ್ದಾರೆ.




