ಬೆಂಗಳೂರು: ರಾಜ್ಯ ಸಚಿವ ಸಂಪುಟ ಪುನಾರಚನೆ ಕೋರಿ ಕಾಂಗ್ರೆಸ್ ಪಕ್ಷದ 31 ಶಾಸಕರು ಪತ್ರವನ್ನು ಹೈಕಮಾಂಡ್ ಗೆ ಬರೆದಿದ್ದಾರೆ. ರಾಹುಲ್ ಗಾಂಧಿ, ಸುರ್ಜೇವಾಲಾಗೆ ಶಾಸಕರು ಮೊದಲ ಬಾರಿಗೆ ಗೆದ್ದ ಶಾಸಕರಿಂದಲೇ ಪತ್ರ ಬರೆಯಲಾಗಿದೆ.
ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಮಹತ್ವದ ಬೆಳವಣಿಗೆಯೊಂದರಲ್ಲಿ, ಸಚಿವ ಸಂಪುಟವನ್ನು ಕೂಡಲೇ ಪುನಾರಚನೆ ಮಾಡಬೇಕೆಂದು ಒತ್ತಾಯಿಸಿ ಕಾಂಗ್ರೆಸ್ನ 31 ಶಾಸಕರು ಹೈಕಮಾಂಡ್ಗೆ ಪತ್ರ ಬರೆದಿದ್ದಾರೆ.
ಈ ನಡೆಯು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದಲ್ಲಿ ಆಂತರಿಕ ಅಸಮಾಧಾನ ಸ್ಫೋಟಗೊಂಡಿರುವುದನ್ನು ಸಾಬೀತುಪಡಿಸಿದೆ.
ಕಳೆದ ಕೆಲವು ದಿನಗಳಿಂದ ತೆರೆಮರೆಯಲ್ಲಿ ನಡೆಯುತ್ತಿದ್ದ ಸಚಿವ ಸ್ಥಾನದ ಆಕಾಂಕ್ಷಿಗಳ ಚಟುವಟಿಕೆ ಈಗ ಬಹಿರಂಗಗೊಂಡಿದೆ.
ಪ್ರಸ್ತುತ ಇರುವ ಸಚಿವ ಸಂಪುಟದಲ್ಲಿ ಬದಲಾವಣೆ ತರಬೇಕು ಮತ್ತು ಹೊಸ ಮುಖಗಳಿಗೆ ಅವಕಾಶ ನೀಡಬೇಕು ಎಂಬ ಬೇಡಿಕೆಯೊಂದಿಗೆ 31 ಶಾಸಕರು ಸಹಿ ಮಾಡಿರುವ ಪತ್ರವನ್ನು ಎಐಸಿಸಿ (AICC) ನಾಯಕರಿಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.




