ದೋಡಾ : ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಬುಧವಾರ (ನವೆಂಬರ್ 15) ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್ ರಸ್ತೆಯಿಂದ ಜಾರಿ 300 ಅಡಿ ಕಣಿವೆಗೆ ಬಿದ್ದ ಪರಿಣಾಮ ಮೃತಪಟ್ಟವರ ಸಂಖ್ಯೆ 36ಕ್ಕೆ ತಲುಪಿದೆ. ಇನ್ನು ಹಲವಾರು ಜನರು ಗಾಯಗೊಂಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಸಂಭವಿಸಿದ ಬಸ್ ಅಪಘಾತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ತಮ್ಮ ಆತ್ಮೀಯರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಇನ್ನು ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.
ಮೃತರ ಕುಟುಂಬಗಳಿಗೆ ಪಿಎಂಎನ್ಆರ್ಎಫ್ನಿಂದ 2 ಲಕ್ಷ ರೂ. ಗಾಯಾಳುಗಳಿಗೆ ತಲಾ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.