ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗಲೇ ಬಿಬಿಎಂಪಿ ಇಬ್ಬರು ಅಧಿಕಾರಿಗಳು ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ.
ಬಿಬಿಎಂಪಿಯ ಯಶವಂತಪುರ ಕಚೇರಿಯ ಎಆರ್ ಒ ಸೇರಿದಂತೆ ಇಬ್ಬರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಎಆರ್ ಒ ರಾಜೇಂದ್ರಪ್ರಸಾದ್ ಹಾಗೂ ತೆರಿಗೆ ಮೌಲ್ಯಮಾಪಕ ಪ್ರಕಾಶ್ ಬಂಧಿತರು.
ವಾಣಿಜ್ಯ ಕಟ್ಟಡದ ತೆರಿಗೆ ಮೊತ್ತ ಕಡಿಮೆ ಮಾಡಲು 4.50 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಲಂಚದ ಹಣದ ಸಮೇತ ಇಬ್ಬರು ಅಧಿಕಾರಿಗಳು ಸಿಕ್ಕಿಬಿದ್ದಿದ್ದು, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಇಬ್ಬರು ಅಧಿಕಾರಿಗಳ ವಿರುದ್ಧ ಬೆಂಗಳೂರಿನ ಲೋಕಾಯುಕ್ತ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.