ಗದಗ: ಬಡ್ಡಿ ದಂಧೆಯಲ್ಲಿ ತೊಡಗಿರುವ ಬೆಟಗೇರಿಯ ಯಲ್ಲಪ್ಪ ಮಿಸ್ಕಿನ್ ಮನೆ ಮೇಲೆ ಇಂದು ಗದಗ ಪೊಲೀಸರು ದಾಳಿ ನಡೆಸಿದ್ದಾರೆ. ಈ ದಾಳಿ ವೇಳೆ ಪತ್ತೆಯಾದ ಹಣ, ಚಿನ್ನಾಭರಣಗಳನ್ನು ಕಂಡು ಪೊಲೀಸರೇ ಶಾಕ್ ಆಗಿದ್ದಾರೆ.
ಈ ಕುರಿತು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್ ನೇಮಕಗೌಡ ಅವರು ಮಾಹಿತಿ ನೀಡಿದ್ದಾರೆ.ಎರಡು ದಿನಗಳಿಂದ ಬಡ್ಡಿ ವ್ಯವಹಾರ ನಡೆಸುತ್ತಿದ್ದ ಯಲ್ಲಪ್ಪ ಮಿಸ್ಕಿನ್ ಮನೆಯ ಮೇಲೆ ದಾಳಿಯನ್ನು ನಡೆಸಲಾಗಿತ್ತು. 13 ಕಡೆಯಲ್ಲಿ ನಡೆಸಿದ ಈ ದಾಳಿಯಲ್ಲಿ 4.90 ಕೋಟಿ ನಗದು, 992 ಗ್ರಾಂ ಚಿನ್ನ ಪತ್ತೆಯಾಗಿದೆ. ಅದನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.
ಯಲ್ಲಪ್ಪ ಮಿಸ್ಕಿನ್ ಮನೆಯಲ್ಲಿ 650 ಬಾಂಡ್, 4 ಎಟಿಎಂ ಕಾರ್ಡ್, 9 ಬ್ಯಾಂಕ್ ಪಾಸ್ ಬುಕ್‌ಗಳು ಕೂಡ ಸಿಕ್ಕಿವೆ. ಜೊತೆಗೆ ಅಕ್ರಮವಾಗಿ ಸಂಗ್ರಹಿಸಿದ್ದ 65 ಲೀಟರ್ ಮದ್ಯವನ್ನು ಜಪ್ತಿ ಮಾಡಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.