Ad imageAd image

ನೇಪಾಳದಲ್ಲಿ ಭೀಕರ ಪ್ರವಾಹ : 42 ಜನ ದುರ್ಮರಣ

Bharath Vaibhav
ನೇಪಾಳದಲ್ಲಿ ಭೀಕರ ಪ್ರವಾಹ : 42 ಜನ ದುರ್ಮರಣ
WhatsApp Group Join Now
Telegram Group Join Now

ಕಠ್ಮಂಡು: ನೇಪಾಳದಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ಭೂಕಂಪ ಸಂಭವಿಸಿದೆ. ಘಟನೆಯಲ್ಲಿ 42 ಜನರು ಸಾವನ್ನಪ್ಪಿದ್ದಾರೆ.

ಧಾರಾಕಾರ ಮಳೆಯಿಂದಾಗಿ ಹಲವೆಡೆ ಪ್ರವಾಹವುಂಟಾಗಿದ್ದು, ಭೂಕುಸಿತ ಸಂಭವಿಸಿದೆ. 42 ಜನರು ಸಾವನ್ನಪ್ಪಿದ್ದು, ಐವರು ಕಣ್ಮರೆಯಾಗಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಗಳಲ್ಲಿ ಬೀಡು ಬಿಟ್ಟಿರುವ ನೇಪಾಳ ಸೇನೆ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಮಳೆ ಹೆಚ್ಚುತ್ತಿರುವುದರಿಂದ ರಕ್ಷಣಾ ಕಾರ್ಯಕ್ಕೆ ಅಡ್ಡಿಯುಂಟಾಗಿದ್ದು, ವಿಳಂಬವಾಗುತ್ತಿದೆ ಎಂದು ತಿಳಿಸಿದ್ದಾರೆ.

ನೇಪಾಳದಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ. ಹಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುನ್ನೆ಼ಚ್ಚರಿಕಾ ಕ್ರಮವಾಗಿ ರಾಜಧಾನಿ ಕಠ್ಮಂಡುಗೆ ಬರುವ ಹಾಗೂ ತೆರಳುವ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!