ಸಾಧನೆಗೆ ಗುರಿ ಮುಖ್ಯ – ಸಿ.ಜಿ.ಹಳ್ಳದ್
ಭಾಲ್ಕಿ : ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಬೇಕು. ಸಾಧನೆಗೆ ಮಹೋನ್ನತ ಗುರಿ ಹೊಂದಿರಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಜಿ.ಹಳ್ಳದ್ ಹೇಳಿದರು.
ತಾಲೂಕಿನ ಕಲವಾಡಿ ಗ್ರಾಮದ ಮಹಾತ್ಮಾಗಾಂಧಿ ಪ್ರೌಢಶಾಲೆಯಲ್ಲಿ, ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ನಿಮಿತ್ಯ ಮಂಗಳವಾರ ನಡೆದ 42ನೇ ಶಾಲಾ ವಾರ್ಷಿಕೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಕೆಲವೇ ದಿನಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಾರಂಭವಾಗುತ್ತವೆ. ಪರೀಕ್ಷೆಗಳಲ್ಲಿ ಯಾವುದೇ ಆತಂಕಕ್ಕೆ ಒಳಗಾಗದೇ ಮಹೋನ್ನತ ಗುರಿಯೊಂದಿಗೆ ಪರೀಕ್ಷೆ ಎದುರಿಸಬೇಕು. ಉತ್ತಮ ಗುರಿಯನ್ನು ಹೊಂದಿರುವ ಸಾಧನೆ ಯಾವತ್ತೂ ವ್ಯರ್ಥವಾಗುವುದಿಲ್ಲ. ಹೀಗಾಗಿ ಸಾಧನೆಗೆ ಉತ್ತಮ ಗುರಿ ಮುಖ್ಯವಾಗಿದೆ. ಪರೀಕ್ಷೆಗಳನ್ನು ಹಬ್ಬದಂತೆ ಸಂಭ್ರಮಿಸಿ, ಉತ್ತಮ ಫಲಿತಾಂಶದತ್ತ ಗಮನ ಹರಿಸಿರಿ ಎಂದು ಕಿವಿಮಾತು ಹೇಳಿದರು. ಪರೀಕ್ಷಾ ಸಮಯದಲ್ಲಿ ಯಾವುದೇ ಅನಗತ್ಯ ಕಾರ್ಯಗಳಲ್ಲಿ ತೊಡಗಿಸಿಕೊಳ್ಳದೇ, ಓದಿನಕಡೆ ಹೆಚ್ಚಿನ ಗಮನ ಹರಿಸಬೇಕು ಎಂದು ಹೇಳಿದರು.

ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ದತ್ತಾತ್ರಿ ಕಾಟಕರ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಪಾಠ ಮಾಡಬೇಕು. ಸಂಸ್ಕಾರಯುತ ಶಿಕ್ಷಣದೊಂದಿಗೆ ಫಲಿತಾಂಶ ಹೆಚ್ಚಿಸುವಲ್ಲಿ ಗಮನ ಹರಿಸಬೇಕು ಎಂದು ಹೇಳಿದರು.
ಕರ್ನಾಟಕ ಪಬ್ಲಿಕ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ನಂದಾದೀಪ ಬೋರಾಳೆ ವಿದ್ಯಾರ್ಥಿಗಳೊಂದಿಗೆ ಪ್ರೇರಣಾದಾಯಕ ಮಾತುಗಳನ್ನು ಆಡಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ಕಾರ್ಯಮಾಡಿದರು. ಕೆ.ಎಲ್.ಇ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಕ್ರಾಂತಿ ಬಸಪ್ಪಾ ಕಲವಾಡಿಕರ್ ಶಿಕ್ಷಣ ಸಂಸ್ಥೆ ನಡೆದುಬಂದ ದಾರಿಯ ಬಗ್ಗೆ ಮಾತನಾಡಿದರು. ಕೆಎಲ್‌ಇ ಸಂಸ್ಥೆಯ ಅಧ್ಯಕ್ಷೆ ಮೋಜಾಬಾಯಿ ಕಲವಾಡಿಕರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯಶಿಕ್ಷಕ ಶಿವಕುಮಾರ ವಾಡಿಕರ ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಮೂಹ ಸಂಪನ್ಮೂಲ ವ್ಯಕ್ತಿ ಸಂತೋಷ ಧಬಾಲೆ, ಭಾಷಾ ಅಲ್ಪಸಂಖ್ಯಾತ ಶಿಕ್ಷಕರ ರಾಜ್ಯ ಉಪಾಧ್ಯಕ್ಷ ಸುಧಾಕರ ಗಾಯಕವಾಡ, ನಿವೃತ್ತ ಮುಖ್ಯಶಿಕ್ಷಕ ಜಯರಾಜ ದಾಬಶೆಟ್ಟಿ, ಯುವಕ್ರಾಂಗ್ರೆಸ್ ಮುಖಂಡ ಸಿದ್ದಾ, ವಿದ್ಯಾಭಾರತಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಬಸವರಾಜ ತೇಗಂಪೂರೆ, ಪಂಡಿತರಾಯ ಬಿರಾದಾರ ಭಾಗ್ಯನಗರ, ವಿಜಯಕುಮಾರ ಗುತ್ತೆದಾರ, ಆನಂದ ಖಂಡಗೊAಡ, ವಿಜಯಲಕ್ಷಿö್ಮ ರಾಠೋಡ, ಪ್ರದೀಪ ಜೊಳದಪಕೆ, ಓಂ ಝೆಡ್ ಬಿರಾದಾರ, ಪ್ರವೀಣ ಸಿಂಧೆ ಉಪಸ್ಥಿತರಿದ್ದರು. ಶಿವಕುಮಾರ ಸ್ವಾಗತಿಸಿದರು. ವಿಜಯಕುಮಾರ ನಿರೂಪಿಸಿದರು. ಪ್ರದೀಪ ವಂದಿಸಿದರು.
ವರದಿ : ಸಂತೋಷ ಬಿಜಿ ಪಾಟೀಲ




