Ad imageAd image

43 ಕ್ರಿಮಿನಲ್ ಕೇಸ್ ವಾಪಸ್ ಆದೇಶ ರದ್ದುಪಡಿಸಿದ ಹೈಕೋರ್ಟ್ : ರಾಜ್ಯ ಸರ್ಕಾರಕ್ಕೆ ಮುಖಭಂಗ 

Bharath Vaibhav
43 ಕ್ರಿಮಿನಲ್ ಕೇಸ್ ವಾಪಸ್ ಆದೇಶ ರದ್ದುಪಡಿಸಿದ ಹೈಕೋರ್ಟ್ : ರಾಜ್ಯ ಸರ್ಕಾರಕ್ಕೆ ಮುಖಭಂಗ 
HIGHCOURT
WhatsApp Group Join Now
Telegram Group Join Now

ಬೆಂಗಳೂರು: ಕ್ರಿಮಿನಲ್ ಕೇಸ್ ಗಳನ್ನು ಹಿಂಪಡೆಯಲು ನಿರ್ಧರಿಸಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ಹಿನ್ನಡೆಯಾಗಿದ್ದು, 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಆದೇಶ ನೀಡಿದ್ದ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ.

ಹುಬ್ಬಳ್ಳಿ ಗಲಭೆ ಪ್ರಕರಣದ ಕೇಸ್ ಸೇರಿದಂತೆ 43 ಕ್ರಿಮಿನಲ್ ಕೇಸ್ ಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ಮುಂದಾಗಿ, ಆದೇಶ ಹೊರಡಿಸಿತ್ತು.ಇದೀಗಸರ್ಕಾರದ 2024ರ ಅ.15ರ ಆದೇಶವನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಸರ್ಕಾರದ ಕ್ರಮ ಪ್ರಶ್ನಿಸಿ ಗಿರೀಶ್ ಭಾರದ್ವಾಜ್ ಎಂಬುವವರು ಹೈಕೋರ್ಟ್ ನಲ್ಲಿ ಪಿಐಎಲ್ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಸಿಜೆ ಎನ್.ವಿ.ಅಂಜಾರಿಯಾ, ನ್ಯಾ.ಕೆ.ವಿ.ಅರವಿಂದ್ ಅವರಿದ್ದ ಪೀಠ, ಸರ್ಕಾರದ ಆದೇಶವನ್ನು ರದ್ದು ಮಾಡಿದೆ.

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!