ಬೆಂಗಳೂರು : 4 ನೇ ಸಲ SSLC ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕಾಚೋನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬಾಲಕಿಯನ್ನು ತನುಶ್ರೀ (17) ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ನಾಲ್ಕು ಬಾರಿ SSLC ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.




