ಅಂಡಮಾನ್ ಮತ್ತು ಬಂಗಾಳಕೊಲ್ಲಿಯಲ್ಲಿ ಶಕ್ತಿ ಚಂಡಮಾರುತ ಪರಿಣಾಮ ದೇಶದ ಬಹುತೇಕ ರಾಜ್ಯಗಳಲ್ಲಿ ಮಳೆರಾಯನ ಆರ್ಭಟ ಮುಂದುವರೆದಿದೆ. ಹಾಗೆಯೇ ಮುಂದಿನ 5-6 ದಿನಗಳ ಕಾಲ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆ ಪುಕಾರ, ದೇಶದ ಬಹುತೇಕ ರಾಜ್ಯಗಳಲ್ಲಿ ಮುಂದಿನ ಹಲವು ದಿನಗಳವರೆಗೆ ಗುಡುಗು, ಮಿಂಚು ಸಹಿತ ಮಳೆಯಾದ್ರೆ, ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಕೆಲವೇ ಕೆಲವೆಡೇ ಮಾತ್ರ ತಾಪಮಾನ ಪ್ರಮಾಣದಲ್ಲಿ ಏರಿಕೆ ಆಗಲಿದೆ ಎಂದು ಮುನ್ಸೂಚನೆ ನೀಡಿದೆ.
ಕರ್ನಾಟಕ, ಕರಾವಳಿ ಆಂಧ್ರಪ್ರದೇಶ, ಗೋವಾ ಮತ್ತು ಕೇರಳ ತಮಿಳುನಾಡು ಸೇರಿದಂತೆ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದ. ಮೇ 20-22ರವರೆಗೆ ಕರಾವಳಿ ಆಂಧ್ರಪ್ರದೇಶ ಮತ್ತು ಯಾನಂ, ಮೇ 19-20ರ ವರೆಗೆ ರಾಯಲಸೀಮಾ, ತಮಿಳುನಾಡಿನ ಪುದುಚೇರಿ ಮತ್ತು ಕಾರೈಕಲ್ ಮೇ 19ರಿಂದ 24ರ ವರೆಗೆ ಕೇರಳ, ಕರ್ನಾಟಕದ ಉತ್ತರ ಒಳನಾಡು ಮತ್ತು ಕರಾವಳಿ ಕರ್ನಾಟಕ, ಮೇ 22ರ ವರೆಗೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.