ಬೆಂಗಳೂರು : 5 ವರ್ಷ ನಾನೇ ಮುಖ್ಯಮಂತ್ರಿ , ಹೆಚ್ಚಿನ ಶಾಸಕರು ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಸಿಲ್ಲ ಎಂದು ದೆಹಲಿಯಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.ದೆಹಲಿ ಪ್ರವಾಸದಲ್ಲಿರುವ ಸಿದ್ದರಾಮಯ್ಯ, ರಾಷ್ಟ್ರೀಯ ಮಾಧ್ಯಮಕ್ಕೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿದ್ದಾರೆ.
ಐದು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿ ಇರುತ್ತೇನೆ. ಯಾವುದೇ ಪವರ್ ಶೇರಿಂಗ್ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಚರ್ಚೆಯಾಗಿಲ್ಲ. ಡಿ.ಕೆ.ಶಿವಕುಮಾರ್ ಕೂಡ ಬದಲಾಗಲಿ ಎಂಬ ಹೇಳಿಕೆ ನೀಡಿಲ್ಲ. ಸಿದ್ದರಾಮಯ್ಯ ಸಿಎಂ ಆಗಿರುವಾಗ ಸಿಎಂ ಬದಲಾವಣೆ ಚರ್ಚೆ ಅನವಶ್ಯಕ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ ಎಂದಿದ್ದಾರೆ.
ಮುಂದಿನ ಐದು ವರ್ಷವೂ ನಾನೇ ಮುಖ್ಯಮಂತ್ರಿಯಾಗಿ ಇರುತ್ತೇನೆ. 2028ರಲ್ಲಿಯೂ ನಾನೇ ಪಕ್ಷವನ್ನು ಮುನ್ನಡೆಸುತ್ತೇನೆ. ನನ್ನ ನೇತೃತ್ವದಲ್ಲಿಯೇ ಚುನಾವಣೆ ನಡೆಯಲಿದೆ ಎಂದು ಸಿದ್ದರಾಮಯ್ಯ ಸ್ಪಷ್ಟ ಪಡಿಸಿದ್ದಾರೆ.