Ad imageAd image

ಭೀಕರ ಅಪಘಾತ : 6 ಜನ ಸ್ಥಳದಲ್ಲೇ ಸಾವು 

Bharath Vaibhav
ಭೀಕರ ಅಪಘಾತ : 6 ಜನ ಸ್ಥಳದಲ್ಲೇ ಸಾವು 
WhatsApp Group Join Now
Telegram Group Join Now

ಹಾವೇರಿ : ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೂಟೆಬೆನ್ನೂರು ಗ್ರಾಮದಲ್ಲಿ ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ 6 ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಯಾವುದೋ ಕಾರ್ಯದ ನಿಮಿತ್ತ ಧಾರವಾಡ ಮೂಲದ ಹಾಲಿ ವಸ್ತಿ ರಾಣೆಬೆನ್ನೂರು ನಗರದ 8 ಜನ ಆಡಿ ಕಾರಿನಲ್ಲಿ ಹೋಗುತ್ತಿದ್ದರು, ಈ ವೇಳೆ ಮೂಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ಎದುರಿಗೆ ಹೋಗುತ್ತಿದ್ದ ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಹಾಗೂ ಚಾಲಕನ ಬದಿಯ ಒಂದು ಸೈಡ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಅಲ್ಲದೇ ಈ ಅಪಘಾತದಲ್ಲಿ 8 ಜನರ ಪೈಕಿ 6 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎನ್ನಲಾಗಿದೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಸ್ಥಳಕ್ಕೆ ಬ್ಯಾಡಗಿ ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ರಕ್ಷಣಾ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!