2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಯಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ಇಳಕಲ್ ತಾಲೂಕಿನ ಸರ್ಕಾರಿ ನೌಕರರ ಮಕ್ಕಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷರು ಹಾಗೂ ಕೇಂದ್ರ ಸಂಘದ ರಾಜ್ಯ ಸಂಘಟನಾ ಕಾರ್ಯದರ್ಶಿ ಪರಶುರಾಮ ಎಸ್ ಪಮ್ಮಾರ ಕೋರಿದ್ದಾರೆ.
ಸಂಬಂಧಿಸಿದಂತೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಇವರ ವತಿಯಿಂದ ಅರ್ಜಿ ಆಹ್ವಾನಿಸಿದ್ದು,ಇಳಕಲ್ ತಾಲೂಕಿನ ಸರ್ಕಾರಿ ನೌಕರರ ಮಕ್ಕಳು 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಯಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿದ್ದು,ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿದ್ದು;
https://ksgeanews.blogspot.com/2025/05/sslc-puc-2025.html
ಈ ಮೇಲಿನ ಆನ್ ಲೈನ್ ಲಿಂಕ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿಗಳ ತಂದೆ ಅಥವಾ ತಾಯಿ ಖಾಯಂ ಸರ್ಕಾರಿ ನೌಕರರಾಗಿರಬೇಕು,ದೃಡಿಕೃತ ಅಂಕಪಟ್ಟಿ ಇರಬೇಕು ಹಾಗೂ ಸಂಘವು ನಿಗದಿಪಡಿಸಿದ ನಮೂನೆಯಲ್ಲಿ ತಾಲೂಕು ಅಧ್ಯಕ್ಷರ ಸಹಿ,ಮೊಹರಿನೊಂದಿಗೆ ಅಗತ್ಯ ದಾಖಲೆಗಳನ್ನು ಅಪಲೋಡ್ ಮಾಡುವಂತೆ ತಾಲೂಕು ಅಧ್ಯಕ್ಷರಾದ ಪರಶುರಾಮ ಎಸ್ ಪಮ್ಮಾರ,ರಾಜ್ಯ ಪರಿಷತ್ ಸದಸ್ಯರಾದ ಈಶ್ವರ ಗಡ್ಡಿ, ಖಜಾಂಚಿಗಳಾದ ಶರಣಗೌಡ ಕೊಣ್ಣೂರ, ಕಾರ್ಯದರ್ಶಿಗಳಾದ ಸಂಗಮೇಶ ಬಂಗಾರಿ ಹಾಗೂ ಸರ್ವ ಪದಾಧಿಕಾರಿಗಳು ವಿನಂತಿಸಿದ್ದಾರೆ.




