Ad imageAd image

ರಾಜ್ಯದಲ್ಲಿ ಒಂದೇ ವರ್ಷದಲ್ಲಿ  68,450 ಏಡ್ಸ್ ಪ್ರಕರಣ ಪತ್ತೆ 

Bharath Vaibhav
ರಾಜ್ಯದಲ್ಲಿ ಒಂದೇ ವರ್ಷದಲ್ಲಿ  68,450 ಏಡ್ಸ್ ಪ್ರಕರಣ ಪತ್ತೆ 
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವರ್ಷದ ಅವಧಿಯಲ್ಲಿ 68,450 ಹೆಚ್‌ಐವಿ ಪ್ರಕರಣ ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಹೆಚ್‌ಐವಿ ಸೋಂಕಿನ ಬಗ್ಗೆ ಯುವಜನತೆ ಸೇರಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿರುವ ಎರಡು ತಿಂಗಳ ಅಂತರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಹೆಚ್‌ಐವಿ ತಡೆ ಪ್ರಚಾರಾಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ದೇಶದಲ್ಲಿ ಹೆಚ್‌ಐವಿ ಸೋಂಕು ಹರಡುವಿಕೆ ಕಡಿಮೆಯಾಗಿದೆ. ಆದರೂ, 2023 -24ನೇ ಸಾಲಿನಲ್ಲಿ ರಾಜ್ಯದಲ್ಲಿ 68,450 ಕೇಸು ವರದಿಯಾಗಿದ್ದು, ದೇಶದಲ್ಲಿರುವ 24.44 ಲಕ್ಷ ಸೋಂಕಿತರ ಪೈಕಿ ಕರ್ನಾಟಕದಲ್ಲಿ 2.28 ಲಕ್ಷ ಸೋಂಕಿತರಿದ್ದಾರೆ. 1.91 ಲಕ್ಷ ಜನ ನಿಯಮಿತವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!