: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಉಗ್ರರು ಹಾಗೂ ಯೋಧರ ನಡುವೆ ಭಾರೀ ಗುಂಡಿನ ಚಕಮಕಿ ನಡೆದಿದ್ದು, ಏಳು ಮಂದಿ ಪಾಕ್ ನುಸುಳುಕೋರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ ಈ ಘಟನೆ ನಡೆದಿದೆ.
ಗಡಿಯಾಚೆಗಿನ ಕಾರ್ಯಾಚರಣೆಗಳಿಗಾಗಿ ವಿಶೇಷ ಘಟಕಗಳಾದ ಪಾಕಿಸ್ತಾನದ ಬಾರ್ಡರ್ ಆಕ್ಷನ್ ಟೀಮ್ (ಬಿಎಟಿ) ಪೋಸ್ಟ್ ಮೇಲೆ ದಾಳಿ ಮಾಡಲು ಪ್ರಯತ್ನಿಸುತ್ತಿದ್ದಾಗ ಭಾರತೀಯ ಸೇನೆಯು ಹೊಂಚುದಾಳಿ ನಡೆಸಿತು.
ಮೃತ ಉಗ್ರರಲ್ಲಿ ಇಬ್ಬರು ಅಥವಾ ಮೂವರು ಪಾಕಿಸ್ತಾನಿ ಸೈನಿಕರಿರಬಹುದು ಎಂದು ಅಂದಾಜಿಸಲಾಗಿದೆ. ಕಾರ್ಯಾಚರಣೆಯಲ್ಲಿ ಹತ್ಯೆಯಾದ ಭಯೋತ್ಪಾದಕರು ಅಲ್-ಬದರ್ ಗುಂಪಿನ ಸದಸ್ಯರಾಗಿರಬಹುದು ಎಂದು ಹೇಳಲಾಗುತ್ತಿದೆ.